Categories
ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ಹೋಟೆಲ್ ಉದ್ಯಮಿ ಆತ್ಮಹತ್ಯೆ!

ತೀರ್ಥಹಳ್ಳಿಯಲ್ಲಿ ಹೋಟೆಲ್ ಉದ್ಯಮಿ ಆತ್ಮಹತ್ಯೆ!
– ಮನೆಯಲ್ಲೇ ನೇಣಿಗೆ ಶರಣಾದ ಯುವಕ
– ಪತ್ನಿ, 8 ತಿಂಗಳ ಮಗು ಹೊಂದಿದ್ದ ಯುವಕ

NAMMUR EXPRESS NEWS
ತೀರ್ಥಹಳ್ಳಿ: ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತೀರ್ಥಹಳ್ಳಿ ಪಟ್ಟಣದ ಬಾಳೆಬೈಲಿನಲ್ಲಿ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಎಸ್ ಬಿ ಐ ಬ್ಯಾಂಕ್ ಬಳಿ ಹೋಟೆಲ್ ನಡೆಸುತ್ತಿದ್ದ ಮಿಥುನ್ (34) ಇವರು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಹಂಡಿಗೆ ಮೂಲದವರು. ಇತ್ತೀಚಿಗೆ ತೀರ್ಥಹಳ್ಳಿಯಲ್ಲಿ ಹೋಟೆಲ್ ಉದ್ಯಮವನ್ನು ಪಾಲುದಾರಿಕೆಯಲ್ಲಿ ಶುರು ಮಾಡಿದ್ದರು. ಪತ್ನಿ ಮತ್ತು 8 ತಿಂಗಳ ಮಗು ಜತೆ ಬಾಳೆಬೈಲಿನಲ್ಲಿ ವಾಸವಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.