ಜೈನ ಮುನಿ ಮರ್ಡರ್ ಖಂಡಿಸಿ ತೀರ್ಥಹಳ್ಳಿಯಲ್ಲಿ ಮೆರವಣಿಗೆ
– ರಾಜ್ಯದಲ್ಲಿ ಹದಗೆಟ್ಟಿದೆ ರಾಜ್ಯದ ಕಾನೂನು ಸುವ್ಯವಸ್ಥೆ
– ತೀರ್ಥಹಳ್ಳಿಯಲ್ಲಿ ಬಿಜೆಪಿಯಿಂದ ಹೋರಾಟ
NAMMUR EXPRESS NEWS
ತೀರ್ಥಹಳ್ಳಿ: ಅತ್ಯಂತ ಸೌಮ್ಯ ಹಾಗೂ ಅಲ್ಪಸಂಖ್ಯಾತ ಸಮುದಾಯವಾದ ಜೈನ ಧರ್ಮದ ಗುರುಗಳಾದ ಚಿಕ್ಕೋಡಿಯ ಶ್ರೀ ಕಾಮಕುಮಾರ ಮಹಾಮುನಿಗಳನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಾಗೂ ಹನುಮಜಯಂತಿ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಟಿ.ನರಸೀಪುರದ ಯುವಬ್ರಿಗೇಡ್ ಕಾರ್ಯಕರ್ತರಾದ ವೇಣುಗೋಪಾಲ್ ಎಂಬಾತನನ್ನು ಅತ್ಯಂತ ಹೀನಾಯವಾಗಿ ಕೊಲೆ ಮಾಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಧಾರ್ಮಿಕ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಜೀವ ಅಪಾಯದಲ್ಲಿದೆ.
ಈ ವಿಷಯದಲ್ಲಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ತೀರ್ಥಹಳ್ಳಿ ಮಂಡಲ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಿತು. ಪ್ರಮುಖರಾದ ಆರ್ ಮದನ್, ಪಕ್ಷದ ಅಧ್ಯಕ್ಷರಾದ ರಾಘವೇಂದ್ರ ಬಾಳೆಬೈಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆದ್ದೂರು ನವೀನ್, ಚಂದವಳ್ಳಿ ಸೋಮಶೇಖರ್, ಶ್ರೀನಿವಾಸ್, ಎಲ್ಲಾ ಪ್ರಮುಖರು, ಕಾರ್ಯಕರ್ತರು ಹಾಗೂ ಸಮಸ್ತ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು. ತೀರ್ಥಹಳ್ಳಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಅಮೃತ್ ಅತ್ರೆಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ : ಯಾವ ಊರಲ್ಲಿ ಜು.9ಕ್ಕೆ ಅಡಿಕೆ ದರ ಎಷ್ಟು ?
HOW TO APPLY : NEET-UG COUNSELLING 2023