ತೀರ್ಥಹಳ್ಳಿಯ ಕುಶಾವತಿ ಬಳಿ ಅಪಘಾತ..!
– ಕಾರಿಗೆ ಡಿಕ್ಕಿ ಹೊಡೆದ ಬೈಕ್, ಓರ್ವನಿಗೆ ಗಾಯ
– ಎಚ್ಚರಿಕೆಯ ಬೋರ್ಡ್ ಅಳವಡಿಸುವಂತೆ ಆಗ್ರಹ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣ ಸಮೀಪದ ಕುಶಾವತಿ ಬಳಿ ಬೈಕು ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀರ್ಥಹಳ್ಳಿ ಪಟ್ಟಣದ ಕುಶಾವತಿ ಸಮೀಪ ಎಳನೀರು ಕುಡಿಯಲು ನಿಲ್ಲಿಸಿದ್ದ ಕಾರಿಗೆ ಹಿಂಬದಿಯಿಂದ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಬೈಕು ಸಂಪೂರ್ಣ ಜಖಂಗೊಂಡಿದೆ. ಘಟನೆಯೆಲ್ಲಿ ಯುವಕನೊಬ್ಬನಿಗೆ ಗಂಭೀರ ಗಾಯವಾಗಿದ್ದು ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನು ಕುಶಾವತಿ ಭಾಗದಲ್ಲಿ ಪದೇ ಪದೇ ಇಂತಹ ಅಪಘಾತಗಳು ಸಂಭವಿಸುತ್ತಿದ್ದು, ಇಲ್ಲಿ ಎಚ್ಚರಿಕೆಯ ಬೋರ್ಡ್ ಅಥವಾ ಕೆಲವು ಸೂಚನೆಗಳನ್ನು ಹಾಕಬೇಕಿದೆ. ಈ ಭಾಗಗಳಲ್ಲಿ ಸಂಚರಿಸುವಾಗ ವಾಹನ ಸವಾರರು ನಿಧಾನವಾಗಿ ಸಂಚರಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.