Categories
ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ

ತೀರ್ಥಹಳ್ಳಿಯಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ
– ನೆಹರು ಯುವ ಕೇಂದ್ರದ ಆಶ್ರಯದಲ್ಲಿ ಕಾರ್ಯಕ್ರಮ
– ವಿದ್ಯಾರ್ಥಿಗಳಿಗೆ ಡ್ರಗ್ಸ್ ವಿರೋಧಿ ಹೋರಾಟಕ್ಕೆ ಕರೆ

NAMMUR EXPRESS NEWS
ತೀರ್ಥಹಳ್ಳಿ:
ನೆಹರು ಯುವಕೇಂದ್ರ, ಶಿವಮೊಗ್ಗ, ಯುವಮಿತ್ರರು (ರಿ.) ತೀರ್ಥಹಳ್ಳಿ, ಹಳೆಯ ವಿದ್ಯಾರ್ಥಿಗಳ ಸಂಘ(ರಿ.) ಮತ್ತು ಸರ್ಕಾರಿ ಪ್ರಥಮದರ್ಜೆ ಕಾಲೇಜು ತೀರ್ಥಹಳ್ಳಿ ಜಂಟಿ ಸಹಭಾಗಿತ್ವದಲ್ಲಿ ಮಾದಕ ವ್ಯಸನ ಮತ್ತು ಮಾದಕ ವಸ್ತುಗಳ ಕುರಿತು ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು. ಕನ್ನಡ ರಾಜ್ಯೋತ್ಸವ-ಸುವರ್ಣ ಕರ್ನಾಟಕ – 50 ಪ್ರಶಸ್ತಿ ಪುರಸ್ಕೃತ ನಿವೃತ್ತ ವೈದ್ಯಾಧಿಕಾರಿ ಡಾ.ಎಚ್.ಎಸ್.ಕೃಷ್ಣಪ್ಪ ಮಾದಕ ವಸ್ತುಗಳ ಕುರಿತು ಜಾಗೃತಿ ಭಿತ್ತಿ ಚಿತ್ರ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾರ್ಜನಿಕರಿಗೆ ಬಹು ಮುಖ್ಯವಾದದ್ದು ಆರೋಗ್ಯ, ವಿದ್ಯಾರ್ಥಿಗಳು ಈ ದೆಸೆಯಲ್ಲಿ ಬಹುಮುಖ್ಯವಾಗಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಮಾದಕ ವಸ್ತುಗಳು ಹಾಗೂ ದುಷ್ಚಟಗಳಿಂದ ವಿಮುಖರಾಗಿ ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾದಕವಸ್ತುಗಳು ದೈಹಿಕ, ಮಾನಸಿಕವಾಗಿ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ದೈನಂದಿನ ಸೇವನೆಯ ಹವ್ಯಾಸ ಮೆದುಳಿಗೆ ತೊಂದರೆ ನೀಡಲಿದ್ದು ಖಿನ್ನತೆ ಸೃಷ್ಟಿಸಲಿದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾದ ತಾಲ್ಲೂಕು ವೈದ್ಯಾಧಿಕಾರಿ ಡಾ.ಕೆ.ಟಿ.ಅನಿಕೇತನ್ ಮಾತನಾಡಿ ಡ್ರಗ್ಸ್ ಸೇವನೆ ದೇಹದ ಡಿಎನ್ಎ ರಚನೆಯನ್ನು ಹಾಳು ಮಾಡುತ್ತದೆ. ಮುಂದಿನ ಪೀಳಿಗೆಯೂ ಅದರ ದುಷ್ಪರಿಣಾಮ ಅನುಭವಿಸುತ್ತಾರೆ ಎಂದರು. ಸಿಪಿಐ ಅಶ್ವಥಗೌಡ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು. ಮಾದಕ ವ್ಯಸನಿಗಳ ಬಗ್ಗೆ ಅಥವಾ ಮಾದಕ ವಸ್ತುಗಳ ಮಾರಾಟದ ಬಗ್ಗೆ ಪೋಲೀಸ್‌ ಇಲಾಖೆಗೆ ಮಾಹಿತಿ ನೀಡಿದರೆ ಅಂತಹ ಮಾಹಿತಿಯನ್ನು ಆಧರಿಸಿ ಅಪರಾಧಿಗಳನ್ನು ಬಂಧಿಸಲಾಗುವುದು ಹಾಗೂ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು. ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಜಯಶ್ರೀ ಸಿ.ಎನ್. ಮಾದಕ ವಸ್ತುಗಳಿಂದ ಆಗುವ ಮಾನಸಿಕ ಖೀನ್ನತೆಯ ಕುರಿತು ಮಾಹಿತಿ ನೀಡಿದರು ಹಾಗೂ ಆರೋಗ್ಯ ಇಲಾಖೆಯಿಂದ ಸಿಗಬಹುದಾದ ನೆರವುಗಳ ಬಗ್ಗೆ ವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಎಲ್ಲಾ ಪ್ರಥಮ ವರ್ಷದ ವಿದ್ಯಾರ್ಥಿಗಳು ಈ ಶಿಕ್ಷಣ ಕಾರ್ಯಕ್ರಮದ ಪ್ರಯೋಜನ ಪಡೆದರು. ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರ ಶಿವಮೊಗ್ಗದ ಜಿಲ್ಲಾ ಯುವ ಅಧಿಕಾರಿ ಉಲ್ಲಸ್ ಕೆ.ಟಿ.ಕೆ., ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ಯುವಮಿತ್ರರು ಕಾರ್ಯದರ್ಶಿ ನಿರಂಜನ ವಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಸೌಮ್ಯ ಕೆ.ಸಿ. ಅಧ್ಯಕ್ಷತೆ ವಹಿಸಿದ್ದರು. ಯುವಮಿತ್ರರು (ರಿ.) ತೀರ್ಥಹಳ್ಳಿಯ ಸಂಯೋಜಕ ಚೇತನ್‌ ಜಿ ಸರ್ವರನ್ನು ಸ್ವಾಗತಿಸಿದರು ಹಾಗೂ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಮಹಮ್ಮದ್ ಇಕ್ಬಾಲ್ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ವಂದಿಸಿದರು. ಯುವಮಿತ್ರರು ತಂಡದ ನಿರಂಜನ ಪವಾರ್‌, ವಿನಂತಿ ಪೈ, ರಾಹುಲ್ ಬಿ ಪಿ ಮತ್ತು ನೆಹರು ಯುವ ಕೇಂದ್ರದ ಸ್ವಯಂ ಸೇವಕ ಶಿವಕುಮಾರ್‌ ಟಿ. ಆರ್‌ ಮುಂತಾದವರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.