11ನೇ ಬಾರಿಗೆ ಗೆದ್ದ ಬಂಡೆ ವೆಂಕಟೇಶ್!
– ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆ
– ಸಹಕರಿಸಿದ ಸರ್ವರಿಗೂ ಬಂಡೆ ವೆಂಕಟೇಶ್ ಅಭಿನಂದನೆ
NAMMUR EXPRESS NEWS
ತೀರ್ಥಹಳ್ಳಿ: ರಾಜಕೀಯ ನಾಯಕ ಬಂಡೆ ವೆಂಕಟೇಶ್ ಇದೀಗ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 11ನೇ ಬಾರಿಗೆ ಬಂಡೆ ವೆಂಕಟೇಶ್ ಮತ್ತು ಶ್ರುತಿ ವೆಂಕಟೇಶ್ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರ ಎಂಬ ಖ್ಯಾತಿಯನ್ನು ಉಳಿಸಿಕೊಂಡಿದ್ದಾರೆ.
ಆಗಸ್ಟ್ 11ರಂದು ನಡೆದಿದ್ದ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಚುನಾವಣೆಗೆ ತೀರ್ಥಹಳ್ಳಿ ತಾಲ್ಲೂಕಿನ ಒಕ್ಕಲಿಗ ಸಮುದಾಯದ ಜನಪ್ರಿಯ ನಾಯಕ, ತೀರ್ಥಹಳ್ಳಿ ಒಕ್ಕಲಿಗ ಸಂಘದ ನಿರ್ದೇಶಕರು,ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿಯ ಹಾಲಿ ಅಧ್ಯಕ್ಷರು ಮತ್ತು ರಾಜ್ಯ ಗ್ರಾಮ ಪಂಚಾಯತಿ ಒಕ್ಕೂಟದ ಉಪಾಧ್ಯಕ್ಷರಾಗಿರುವ ಬಂಡೆ ವೆಂಕಟೇಶ್ ಅವರು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನದ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿ ಸ್ಪರ್ಧೆ ಮಾಡಿರುವ ಶ್ರುತಿ ವೆಂಕಟೇಶ್ ಕೂಡ ಎಲ್ಲಾ ಚುನಾವಣೆಯಲ್ಲಿ ಗೆದ್ದಿದ್ದಾರೆ.
ಬಂಡೆ ವೆಂಕಟೇಶ್ ಅಭಿನಂದನೆ
ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತ ಹಾಕಿ ಗೆಲ್ಲಿಸಿದ ಹಿತೈಷಿಗಳು, ಸ್ನೇಹಿತರು, ಬಂಧು ಬಳಗದವರು ಮತ್ತು ಒಕ್ಕಲಿಗ ಸಮುದಾಯದ ಮತದಾರರಿಗೆ ಬಂಡೆ ವೆಂಕಟೇಶ್ ಅಭಿನಂದನೆ ಸಲ್ಲಿಸಿದ್ದಾರೆ.