Categories
ತೀರ್ಥಹಳ್ಳಿ

ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು
– ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ: ಈಗ ಚೇತರಿಕೆ
– ಮಾಜಿ ಮುಖ್ಯಮಂತ್ರಿಗಳಿಗೆ ಆಗಿದ್ದೇನು…?

NAMMUR EXPRESS NEWS
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಅವರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲಿನ ನೋವಿಗೆ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಸವರಾಜ್‌ ಬೊಮ್ಮಾಯಿ ಅವರ ಕುರಿತು ಟ್ವೀಟ್‌ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.