ತೀರ್ಥಹಳ್ಳಿಯಲ್ಲಿ ಜು.8ಕ್ಕೆ ಬಿಜೆಪಿ ಸಮಾವೇಶ!
– ಯಡಿಯೂರಪ್ಪ, ಆರಗ, ರಾಘವೇಂದ್ರ ಹಾಜರ್
– ಸಮಸ್ತ ಕಾರ್ಯಕರ್ತರನ್ನು ಸ್ವಾಗತಿಸಿದ ಆರಗ ಜ್ಞಾನೇಂದ್ರ
NAMMUR EXPRESS NEWS
ತೀರ್ಥಹಳ್ಳಿ: ಕೇಂದ್ರ ಸರ್ಕಾರದ 9ನೇ ವರ್ಷ ಪೂರೈಸಿದ ಸಂದರ್ಭದಲ್ಲಿ ಬಿಜೆಪಿ ತೀರ್ಥಹಳ್ಳಿ ವತಿಯಿಂದ ವಿವಿಧ ಮೋರ್ಚಾಗಳ ಸಂಯುಕ್ತ ಸಮಾವೇಶ ಕಾರ್ಯಕ್ರಮವನ್ನು 08-07-2023ರ ಶನಿವಾರ ಬೆಳಗ್ಗೆ 10.30ಕ್ಕೆ ವಿದ್ಯಾದಿ ರಾಜ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ ಹಾಗೂ ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಕೊಡಬೇಕಾಗಿ ಬಿಜೆಪಿ ತೀರ್ಥಹಳ್ಳಿ ಪ್ರಮುಖರು ಮನವಿ ಮಾಡಿದ್ದಾರೆ.
ಸಮಾವೇಶದಲ್ಲಿ ಎಲ್ಲಾ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಮಸ್ತ ಜನತೆ ಭಾಗವಹಿಸುವಂತೆ ಶಾಸಕ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..ಕಾಳು ಮೆಣಸು ದರ ಎಷ್ಟು?
[embedyt] https://www.youtube.com/watch?v=-UejHxlYBXg%5B/embedyt%5D

HOW TO APPLY : NEET-UG COUNSELLING 2023
