ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಸಂಭ್ರಮ!
– ಆ.31ಕ್ಕೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಆಚರಣೆ
– ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಈಡಿಗ ಸಂಘಟನೆಗಳ ಸಹಯೋಗ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕು ಆಡಳಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಆರ್ಯ ಈಡಿಗರ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿ ಆಚರಣೆಯನ್ನು ಬೆಳಿಗ್ಗೆ 11.30 ಕ್ಕೆ ಶಾಂತವೇರಿ ಗೋಪಾಲಗೌಡರ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಯೋಗಾನಂದ ಅವಧೂತರು ವಹಿಸಲಿದ್ದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಸುಧಾಕರ್ ಆಗಮಿಸಲಿದ್ದಾರೆ.
ಕ್ಷೇತ್ರದ ಶಾಸಕರೂ,ಮಾಜಿ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಈ ಕಾರ್ಯ ಕ್ರಮದ ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ,ಎಸ್ ರುದ್ರೇಗೌಡ, ಭಾರತಿ ಶೆಟ್ಟಿ.ಡಿ.ಎಸ್ ಅರುಣ್, ಉಪಾಧ್ಯಕ್ಷ ರಹಮತ್-ಉಲ್ಲಾ-ಅಸಾದಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ಮತ್ತು ಪ.ಪಂ ಸದಸ್ಯರುಗಳು ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಯ ಅಧ್ಯಕ್ಷ- ಉಪಾಧ್ಯಕ್ಷ-ಸದಸ್ಯರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ವರನ್ನೂ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಹ್ವಾನಿಸಲಾಗಿದೆ.
ತೀರ್ಥಹಳ್ಳಿಯಲ್ಲಿ ಸಾರ್ವಜನಿಕ ಮೆರವಣಿಗೆ
ದಿನಾಂಕ : 31.08.2023 ನೇ ಗುರುವಾರ ಬೆಳಿಗ್ಗೆ 9.00 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬೊಮ್ಮರಸಯ್ಯನ ಅಗ್ರಹಾರದಲ್ಲಿರುವ ಶ್ರೀ ನಾರಾಯಣ ಗುರು ಮಂದಿರದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಪ್ರಸಾದ ವಿನಿಯೋಗವಿರುತ್ತದೆ. ನಂತರ ಬೊಮ್ಮರಸಯ್ಯನ ಅಗ್ರಹಾರದಿಂದ- ಕುರುವಳ್ಳಿ- ಕೊಪ್ಪ ವೃತ್ತ- ಆಗುಂಬೆ ಸರ್ಕಲ್-ಮಸೀದಿ ರಸ್ತೆ ಮುಖಾಂತರ ಸೊಪ್ಪುಗುಡ್ಡೆ ಶ್ರೀ ಶಾಂತವೇರಿ ಗೋಪಾಲಗೌಡ ರಂಗಮಂದಿರದ ವರೆಗೆ ಸಾರ್ವಜನಿಕ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಈಡಿಗ ಸಂಘಟನೆಗಳ ಸಾಥ್
ತೀರ್ಥಹಳ್ಳಿ ತಾಲೂಕಿನ ಶ್ರೀ ನಾರಾಯಣ ಗುರು ವಿಚಾರ ವೇದಿಕೆ, ಈಡಿಗರ ಸಂಘ, ಬಿಲ್ಲವ ಸಂಘ, ಈಡಿಗ ಮಹಿಳಾ ಸಂಘಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.
