Categories
ತೀರ್ಥಹಳ್ಳಿ

ತುಂಗಾ ಪಿಯು ಕಾಲೇಜಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ತುಂಗಾ ಪಿಯು ಕಾಲೇಜಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ
– ಜ್ಞಾನ, ಕೌಶಲ್ಯ ಮತ್ತು ಆತ್ಮವಿಶ್ವಾಸ ಬದುಕು ರೂಪಿಸುತ್ತೆ
– ವಿದ್ಯಾರ್ಥಿಗಳಿಗೆ ಬದುಕಿನ ಪಾಠ ಕಲಿಸಿದ ಚಾರ್ಟರ್ಡ್ ಅಕೌಂಟೆಂಟ್ ವಿಜೇಂದ್ರ ಕಾಮತ್

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯ ಪ್ರತಿಷ್ಠಿತ ತುಂಗಾ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸೆಮಿನಾರ್ ಹಾಲಿನಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ಚಾರ್ಟರ್ಡ್ ಅಕೌಂಟೆಂಟ್ ವಿಜೇಂದ್ರ ಕಾಮತ್ ಅವರು ವಾಣಿಜ್ಯ ಕ್ಷೇತ್ರದ ಅವಕಾಶಗಳು ಮತ್ತು ಚಾರ್ಟರ್ಡ್ ಅಕೌಂಟೆಂಟ್ ಆಗುವ ಮಾರ್ಗವನ್ನು ವಿವರಿಸುತ್ತಾ ಕೇವಲ ಅತ್ಯುನ್ನತ ಅಂಕಗಳಿಕೆ ಮಾತ್ರ ಶಿಕ್ಷಣವಲ್ಲ ಜೀವನ ಕೌಶಲ್ಯ ಮತ್ತು ಉದ್ಯೋಗ ಮಾರ್ಗದರ್ಶನವು ಅಗತ್ಯವೆಂದು ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯ ಹಂತಗಳು, ತರಬೇತಿ ಅವಧಿ ಮತ್ತು ಅಗತ್ಯ ಕೌಶಲ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.
ತುಂಗಾ ವಿದ್ಯಾವರ್ಧಕ ಸಂಘದ ಖಜಾಂಜಿಗಳಾದ ಶ್ರೀಕಾಂತ್ ಭಟ್ ಅವರು ವಾಣಿಜ್ಯ ವೇದಿಕೆಯನ್ನು ಸದೃಢವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಅಭಿವೃದ್ದಿಪಡಿಸಿಕೊಳ್ಳಬೇಕೆಂದು ಹೇಳಿದರು.
ತುಂಗಾ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಬಿ. ಗಣಪತಿ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ, ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತರಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಸಲಹೆ ನೀಡಿದರು. ಅವರು ವ್ಯಕ್ತಿತ್ವ ವಿಕಸನದೊಂದಿಗೆ ಸ್ವತಃ ತಮ್ಮ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗವನ್ನು ಆರಿಸಿಕೊಳ್ಳಬೇಕೆಂದು ಸಲಹೆ ನೀಡಿ, ಹಣದ ಹಿಂದೆ ಓಡುವ ಬದಲು ಉತ್ತಮ ಗುಣಗಳೊಂದಿಗೆ ಮಾನವೀಯ ಮೌಲ್ಯಗಳನ್ನು ಅನುಸರಿಸಿ ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕೆಂದರು.
ವಿದ್ಯಾರ್ಥಿಗಳು ಈ ಉಪನ್ಯಾಸದಿಂದ ವಾಣಿಜ್ಯ ಕ್ಷೇತ್ರದ ವೃತ್ತಿ ಸಾಧ್ಯತೆಗಳ ಬಗ್ಗೆ ಸ್ಪಷ್ಟ ಅರಿವು ಪಡೆಯುವ ಮೂಲಕ ಪ್ರೇರಣೆ ಪಡೆದರು. ಕಾರ್ಯಕ್ರಮವು ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಸಹಾಯಕರಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಶ್ರೇಯ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರಸನ್ನ ಕೆ.ಎಲ್ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ನಂದನ್ ಕುಮಾರ್ ಸರ್ವರನ್ನು ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಮೂಲ್ಯ ಮತ್ತು ವೈಷ್ಣವಿ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.