Categories
ತೀರ್ಥಹಳ್ಳಿ

ಹೆಬ್ರಿ ಎಸ್ ಆರ್ ಸಂಸ್ಥೆಗೆ 25ನೇ ವರ್ಷದ ಸಂಭ್ರಮ!

ಹೆಬ್ರಿ ಎಸ್ ಆರ್ ಸಂಸ್ಥೆಗೆ 25ನೇ ವರ್ಷದ ಸಂಭ್ರಮ!
– ಸಂಸ್ಥೆಯ ಮುಖ್ಯಸ್ಥ ನಾಗರಾಜ್ ಶೆಟ್ಟಿ ಅವರಿಂದ ಶಿಕ್ಷಣ ಸಚಿವರಿಗೆ ಆಹ್ವಾನ
– ಜನವರಿ 13ರಂದು ಕಾರ್ಯಕ್ರಮ; ಸರ್ವರಿಗೂ ಆಹ್ವಾನ

NAMMUR EXPRESS NEWS
ತೀರ್ಥಹಳ್ಳಿ : ಹೆಬ್ರಿಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಎಸ್ ಆರ್ ಶಿಕ್ಷಣ ಸಂಸ್ಥೆಯ 25ನೇ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದೆ. ಜನವರಿ 13ರಂದು ಕರಾವಳಿ ಹಾಗೂ ಮಲೆನಾಡಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಬ್ರಿಯ ಎಸ್ ಆರ್ ಶಿಕ್ಷಣ ಸಮೂಹ ಸಂಸ್ಥೆಯಲ್ಲಿ 25ನೇ ವರ್ಷದ ಸಂಭ್ರಮಾಚರಣೆ ನಡೆಯಲಿದ್ದು ಈಗಾಗಲೇ ಅಂತಿಮ ಸಿದ್ಧತೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು, ಜೊತೆಗೆ ಹಳೆಯ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲು ಇತ್ತೀಚಿಗೆ ತೀರ್ಥಹಳ್ಳಿ ಹೊಸನಗರ ತಾಲೂಕಿನ ಯಡೂರು ಬಳಿ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಎಸ್ ಆರ್ ಎಸ್ ಶಿಕ್ಷಣ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ಶೆಟ್ಟಿ ಅವರು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದರು. ಜೊತೆಗೆ ಈ ಸಂದರ್ಭದಲ್ಲಿ ಶಿಕ್ಷಣದ ವಿವಿಧ ಅಭಿವೃದ್ಧಿ ಹಾಗೂ ಕಾಲೇಜಿನ ಬಗ್ಗೆ ಮಾತುಕತೆ ನಡೆಸಿದರು. ಸಚಿವರು ಎಸ್ ಆರ್ ಎಸ್ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು ಈ ವೇಳೆ ಸಹಕಾರಿ ನಾಯಕ ಡಾ. ಆರ್ ಎಂ ಮಂಜುನಾಥ್ ಗೌಡ ಅವರಿಗೂ ಕೂಡ ಆಹ್ವಾನ ನೀಡಲಾಯಿತು. ಈ ವೇಳೆ ಪ್ರಮುಖರಾದ, ಸಹಕಾರಿ ಯುವ ಮುಖಂಡರಾದ ರಾಘವೇಂದ್ರ ಶೆಟ್ಟಿ, ಶಚ್ಛೀಂದ್ರ ಹೆಗಡೆ, ಡಾ.ಸುಂದರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜನವರಿ 13ರಂದು ನಡೆಯಲಿರುವ ಈ ಸಂಸ್ಥೆಯ 25ನೇ ವಾರ್ಷಿಕೋತ್ಸವದ ಸಂಭ್ರಮಕ್ಕೆ ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ಶೆಟ್ಟಿಯವರು ಸರ್ವರನ್ನೂ ಸ್ವಾಗತಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.