Categories
ತೀರ್ಥಹಳ್ಳಿ

ತೀರ್ಥಹಳ್ಳಿಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಪದಕ

ತೀರ್ಥಹಳ್ಳಿಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಪದಕ
– ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಎನ್. ಕಲಗುಜ್ಜಿ ಹಾಗೂ ಮಾಳೂರು ಸಿಪಿಐ ಶ್ರೀಧರ್ ಅವರಿಗೆ ಸಿಎಂ ಪದಕ ಗೌರವ
– ಇಬ್ಬರು ಜನ ಸ್ನೇಹಿ ಅಧಿಕಾರಿಗಳಿಗೆ ಶುಭಾಶಯಗಳು

NAMMUR EXPRESS NEWS
ತೀರ್ಥಹಳ್ಳಿ: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ 197 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 2024ನೇ ಸಾಲಿನ ಮುಖ್ಯಮಂತ್ರಿ ಪದಕಗಳನ್ನು ಪ್ರಕಟಿಸಲಾಗಿದೆ. ಅಚ್ಚರಿ ಎಂದರೆ ತೀರ್ಥಹಳ್ಳಿಯ ಇಬ್ಬರು ಅಧಿಕಾರಿಗಳಿಗೆ ಈ ಸಾಲಿನ ಮುಖ್ಯಮಂತ್ರಿಗಳ ಪದಕ ಲಭಿಸಿದೆ.
ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಎನ್. ಕಲಗುಜ್ಜಿ ಹಾಗೂ ಮಾಳೂರು ಸಿಪಿಐ ಶ್ರೀಧರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ.
ಒಳಾಡಳಿತ ಇಲಾಖೆ ಮುಖ್ಯ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದು, ಉಡುಪಿ ಜಿಲ್ಲೆಯ ಕಾರ್ಕಳ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾಗಿ ಇದೀಗ ತೀರ್ಥಹಳ್ಳಿ ಡಿವೈಎಸ್ಪಿ ಆಗಿ ಸೇವೆ ಸಲ್ಲಿಸುತ್ತಿರುವ ಅರವಿಂದ ಎನ್. ಕಲಗುಜ್ಜಿ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ.
ಮೂಲತಃ ಕಾರವಾರದವರಾದ ಅರವಿಂದ್ ಎನ್. ಕಲಗುಜ್ಜಿ ಅವರು
2023ರ ಫೆ. 1ರಂದು ಕಾರ್ಕಳದ ಡಿವೈಎಸ್‌ಪಿಯಾಗಿ ಅಧಿಕಾರ ವಹಿಸಿದ್ದರು. 2 ವರ್ಷಗಳ ಕಾಲ ಕಾರ್ಕಳದಲ್ಲಿ ಕರ್ತವ್ಯ ಸಲ್ಲಿಸಿದ ಅವರು 2025ರ ಫೆಬ್ರವರಿಯಲ್ಲಿ ವರ್ಗಾವಣೆಗೊಂಡಿದ್ದು, ಪ್ರಸ್ತುತ ತೀರ್ಥಹಳ್ಳಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರಳ ವ್ಯಕ್ತಿತ್ವದ ಡೈನಾಮಿಕ್ ಅಧಿಕಾರಿ ಎಂದು ಹೆಸರು ಪಡೆದಿರುವ ಅರವಿಂದ್ ಅವರಿಗೆ ಪೊಲೀಸ್ ಇಲಾಖೆ ಸಿಬ್ಬಂದಿ ಶುಭಾಶಯ ಸಲ್ಲಿಸಿದ್ದಾರೆ.

ಮಾಳೂರು ಸಿಪಿಐ ಶ್ರೀಧ‌ರ್ ಕೆ ಅವರಿಗೆ ಪದಕ ಸಂಭ್ರಮ

2024ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳಿಗೆ ಘೋಷಿಸಲಾಗಿದ್ದು ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಧ‌ರ್ ಕೆ. ಅವರನ್ನು ಆಯ್ಕೆ ಮಾಡಿ ಸರ್ಕಾರದ ಒಳಾಡಳಿತದ ಅಪರ ಮುಖ್ಯ ಕಾರ್ಯದರ್ಶಿ ಎಂ.ಧನಂಜಯ ಅದೇಶಿಸಿದ್ದಾರೆ.
ಶ್ರೀಧ‌ರ್ ಮಾಳೂರು ವೃತ್ತ ನಿರೀಕ್ಷಕರಾಗಿದ್ದು ಅವರ ಅಧೀನದಲ್ಲಿ ಮಾಳೂರು ಮತ್ತು ಆಗುಂಬೆ ಪೊಲೀಸ್ ಠಾಣೆ ಇದೆ. ಸಿಬ್ಬಂದಿಗಳೊಂದಿಗೆ ಸೌಜನ್ಯಯುತವಾಗಿರುವ ಅವರ ಬಗ್ಗೆ ಸಿಬ್ಬಂದಿ ವರ್ಗದಲ್ಲಿ ಉತ್ತಮ ಅಭಿಪ್ರಾಯಗಳು ಇವೆ. ಬಂದೋಬಸ್ತ್ ಮುಂತಾದ ಕಠಿಣ ಸಂದರ್ಭದಲ್ಲಿಯೂ ಸಿಬ್ಬಂದಿಗಳ ಮಾನಸಿಕ ಸ್ಥೆರ್ಯವನ್ನು ಹೆಚ್ಚಿಸುವ ನಿಪುಣತೆಯನ್ನು ಹೊಂದಿದ್ದಾರೆ. ಸೌಜನ್ಯಯುತವಾಗಿ ಸಿಬ್ಬಂದಿಗಳ ಜೊತೆ ಕರ್ತವ್ಯಕ್ಕೆ ಅಣಿಯಾಗುತ್ತಾರೆಂಬ ಅಭಿಪ್ರಾಯಗಳು ಇವೆ. ಜೊತೆಗೆ ಇವರ ಅವಧಿಯಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿವೆ. ತೀರ್ಥಹಳ್ಳಿ ತಾಲೂಕಿನ ಸಜ್ಜನ ಅಧಿಕಾರಿಗೆ ಪದಕ ಸಿಕ್ಕಿರುವುದು ಇಲಾಖೆಯಲ್ಲಿ ಸಂತಸಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.