ತೀರ್ಥಹಳ್ಳಿ ಜೆ.ಸಿ. ಆಸ್ಪತ್ರೆಯಲ್ಲಿ ಸಂಪೂರ್ಣ ಬದಲಾವಣೆ..!!
– ಡಾ.ಅರವಿಂದ ಕೆ.ವಿ. ಪ್ರಭಾರ ವೈದ್ಯಾಧಿಕಾರಿಯಾಗಿ ನೇಮಕ
NAMMUR EXPRESS NEWS
ತೀರ್ಥಹಳ್ಳಿಯ ತಾಲ್ಲೂಕು ಜೆ.ಸಿ.ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಣೇಶ್ ಆರ್ ಭಟ್ ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಖಾಲಿ ಇರುವ ಅರವಳಿಕೆ ತಜ್ಞ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಇದರಿಂದ ಜೆ.ಸಿ.ಆಸ್ಪತ್ರೆಯ ವೈದ್ಯಾಧಿಕಾರಿ ಹುದ್ದೆ ಖಾಲಿಯಾಗಲಿದೆ. ಆ ಜಾಗಕ್ಕೆ ಸ್ತ್ರೀರೋಗ ತಜ್ಞ ವೈದ್ಯ ಡಾ. ಅರವಿಂದ ಕೆ.ವಿ ಪ್ರಭಾರ ವೈದ್ಯಾಧಿಕಾರಿಯಾಗಿ ಹುದ್ದೆ ಜವಾಬ್ದಾರಿ ವಹಿಸಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಆದೇಶಿಸಿದ್ದಾರೆ. ಜಯಚಾಮರಾಜೇಂದ್ರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ತೀರ್ಥಹಳ್ಳಿ ಇಲ್ಲಿನ ಮುಖ್ಯ ವೈದ್ಯಾಧಿಕಾರಿಗಳ ಹುದ್ದೆಯ ಆಡಳಿತ ಮತ್ತು ಆರ್ಥಿಕ ಪ್ರಭಾರವನ್ನು ಹಸ್ತಾಂತರಿಸಲು ಸೂಚಿಸಿದ್ದಾರೆ.
