Categories
ತೀರ್ಥಹಳ್ಳಿ

ಬೆಜ್ಜವಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿಜಾಥ..!

ಬೆಜ್ಜವಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿಜಾಥ..!
– ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
– ಸಂಭ್ರಮದ ಸ್ವಾಗತದ ಜೊತೆಗೆ ಗ್ರಾಮಸ್ಥರ ಸಹಯೋಗ

NAMMUR EXPRESS NEWS
ತೀರ್ಥಹಳ್ಳಿ: ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷ ನಿಮಿತ್ತ ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಕಾರ್ಯಕ್ರಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನ ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಡಿ.ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉಪಾಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಬಿ.ಎಸ್,‌ ಸದಸ್ಯರುಗಳಾದ ಹೆಚ್.ಎಸ್.ಉಮೇಶ್, ಶ್ರೀ ಮಹೇಶ್ ಮೇಲಿನ ಕೊಪ್ಪ, ನೇತ್ರಾವತಿ, ಆಶಾ, ಮಮತಾ, ಗೀತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಆಶಾಲತಾ, ‌‌ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಂಗಾಧರ ನಾಯ್ಕ ವೈ.ಎಲ್, ಶಿಕ್ಷಣ ಸಂಯೋಜಕಿ ಶ್ರೀಮತಿ ಜ್ಯೋತಿ, ಉಪತಹಸೀಲ್ದಾರ್ ಶಿವಪ್ರಸಾದ್ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿರಿಯ ಹಾಗೂ ಹಿರಿಯ ಪ್ರೌಢಶಾಲಾ ಮಕ್ಕಳು‌‌, ಶಾಲಾ‌ ಶಿಕ್ಷಕರ ವೃಂದ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸ್ವಸಹಾಯ ಸಂಘದವರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಪುಷ್ಪ ಅರ್ಪಣೆ ಮಾಡುವುದರ ಮೂಲಕ ಬರಮಾಡಿಕೊಂಡು ‌‌, ಬೈಕ್ ರ್‍ಯಾಲಿ, ಮಕ್ಕಳ‌ ಜಾಥಾ ಮೂಲಕ ಗ್ರಾಮ ಪಂಚಾಯತಿ ಆವರಣಕ್ಕೆ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಸ್ವಾಗತ ಮಾಡಲಾಯಿತು. ನಂತರ ವೇದಿಕೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಮಾಡಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಶಾಂತ್ ಡಿ.ಎಸ್ ವಹಿಸಿದ್ದರು, ಮಾಳೂರು ಪ.ಪೂ.ಕಾ.ಉಪನ್ಯಾಸಕರಾದ ಚಂದ್ರಶೇಖರ್ ರವರು ಸಂವಿಧಾನ ಕುರಿತು ಉಪನ್ಯಾಸವನ್ನು ನೀಡಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮೇಲಿನ ಕೊಪ್ಪ ಗ್ರಾ.ಪಂ. ಸದಸ್ಯರಾದ ಮಹೇಶ್ ಸಂವಿಧಾನ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು. ವಿವಿಧ ಶಾಲಾ ಶಿಕ್ಷಕರು ಭಾಗವಹಿಸಿದ್ದರು, ಸಂವಿಧಾನ ಕುರಿತು ಪ್ರಬಂಧ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಪಂಚಾಯತಿ ಎಲ್ಲಾ ಸದಸ್ಯರು, ಶಾಲಾ ಸಿಬ್ಬಂದಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.