ತೂದುರು ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ.!
– ಬೈಕ್ ರ್‍ಯಾಲಿ ಹಾಗೂ ಶಾಲಾ ಮಕ್ಕಳ ವೇಷ ಭೂಷಣ ಮುಖಾಂತರ ಅದ್ದೂರಿ ಸ್ವಾಗತ
NAMMUR EXPRESS NEWS
ತೀರ್ಥಹಳ್ಳಿ : ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮಿತ್ತ ದಿನಾಂಕ : 19-02-2024 ರ ಸೋಮವಾರ ಸಂವಿಧಾನ ಜಾಗೃತಿ ಜಾಥ ತೂದುರು ಗ್ರಾಮ ಪಂಚಾಯಿತಿಗೆ ಆಗಮಿಸಿದ್ದು, ಜಾಗೃತಿ ಜಾಥ ವಾಹನವನ್ನು ಗ್ರಾಮ ಪಂಚಾಯತಿಯಿಂದ ಬೈಕ್ ರ್‍ಯಾಲಿ ಹಾಗೂ ಬ್ಯಾಂಡ್ ಸೆಟ್ ಮುಖಾಂತರ ಶಾಲಾ ಮಕ್ಕಳ ವೇಷ ಭೂಷಣ ಹಾಗೂ ಬಲೂನ್ ಒಳಗೊಂಡಂತೆ ಸರ್ಕಾರಿ ಪ್ರೌಢಶಾಲೆ ಆವರಣದವರೆಗೆ ಜಾಥದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ವೇದಿಕೆ ಕಾರ್ಯಕ್ರಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಎನ್ ಶಶಿಕಲಾ ದೇವರಾಜ್, ಉಪಾಧ್ಯಕ್ಷರಾದ ಶ್ರೀ ಎಂ.ಡಿ ಅರವಿಂದ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಸಂವಿಧಾನದ ಕಾರ್ಯಕ್ರಮದಲ್ಲಿ ಸರ್ವರನ್ನು ಸ್ವಾಗತಿಸಿದರು ಮತ್ತು ಸಂವಿಧಾನ ಪೂರ್ವ ಪೀಠಿಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪಂಚಾಯತಿಯ ಸದಸ್ಯರಾದ ಶ್ರೀ ಆರ್ ಏನ್ ಭುಜಂಗ ಅವರು ಸಂವಿಧಾನದ ಕುರಿತು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಕುರಿತು ಪ್ರಾಸ್ತವಿಕ ನುಡಿಗಳನ್ನಾಡಿದರು. ತೀರ್ಥಹಳ್ಳಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಯಾದ ಆಶಾಲತಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಭಾಷಣ ಮಾಡಿದರು. ತೂದುರು ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರು ಸಂವಿಧಾನದ ಬಗ್ಗೆ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀ ಮಧುರಾಜ್ ಹಾಗೂ ಶರತ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ತುದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಭಾಗ್ಯ, ಕು ಅಶ್ವಿನಿ, ಶ್ರೀಮತಿ ನೂತನ, ಶ್ರೀಮತಿ ಮಿತ್ರ ಹಾಗೂ ರಾಜೇಶ್ ಗ್ರಾಮ ಪಂಚಾಯಿತಿ ಸದಸ್ಯರು, ಶ್ರೀ ಮುಡುಬ ರಾಘವೇಂದ್ರ ಕಾಂಗ್ರೆಸ್ ಮುಖಂಡರು, ಶ್ರೀ ರತ್ನಾಕರ್ ಗೌಡ್ರು ಗ್ರಾಮದ ಮುಖಂಡರು, ಶ್ರೀ ಜಲೀಲ್ ಎಸ್.ಡಿ.ಎಂ. ಸಿ ಅಧ್ಯಕ್ಷರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತೂದೂರು, ಶ್ರೀ ಕವಿರಾಜ ಎಸ್.ಡಿ.ಎಂ.ಸಿ ಅಧ್ಯಕ್ಷರು ಸರ್ಕಾರಿ ಪ್ರೌಢಶಾಲೆ ತೂದೂರು, ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಸ್ವ ಸಹಾಯ ಸಂಘದ ಸದಸ್ಯರು, ಪದಾಧಿಕಾರಿಗಳು, ಮಹಿಳಾ ಸಂಘದ ಸದಸ್ಯರುಗಳು, ಪದಾಧಿಕಾರಿಗಳು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಪಿ.ಡಿ.ಓ, ಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ ಉಪಸ್ಥಿತಿಯಲ್ಲಿದ್ದರು.
