ಶಿಂಗನಬಿದಿರೆ ಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ
– ಗ್ರಾಮ ಪಂಚಾಯಿತಿ ಆವರಣದವರೆಗೆ ಜಾಥಾದೊಂದಿಗೆ ಅದ್ದೂರಿ ಸ್ವಾಗತ
– ಸಂವಿಧಾನದ ಬಗ್ಗೆ ಮಕ್ಕಳಿಗೆ ತಿಳುವಳಿಕೆ
NAMMUR EXPRESS NEWS
ಶಿಂಗನಬಿದಿರೆ ಗ್ರಾಮ ಪಂಚಾಯಿತಿಯಲ್ಲಿ ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷ ನಿಮಿತ್ತ ಸೋಮವಾರ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಶಿಂಗನಬಿದಿರೆ ಯಲ್ಲಿ ಜಾಗೃತಿ ಜಾಥಾ ವಾಹನವನ್ನು ಬ್ಯಾಂಡ್ ಸೆಟ್ ಮುಖಾಂತರ ಶಾಲಾ ಮಕ್ಕಳ ವೇಷಭೂಷಣ ಹಾಗೂ ಬಲೂನ್ ಮತ್ತು ರಾಷ್ಟ್ರಧ್ವಜಗಳನ್ನು ಒಳಗೊಂಡಂತೆ ಗ್ರಾಮ ಪಂಚಾಯಿತಿ ಆವರಣದವರೆಗೆ ಜಾಥಾದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ವೇದಿಕೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನ ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನವೀನ್ ಆರ್ ಕುಳ್ಳುಂಡೆ ಅವರು ಉದ್ಘಾಟಿಸಿದರು. ಭಾಸ್ಕರ್ ಬಿ. ಎಮ್ ರವರು ಸರ್ವರನ್ನು ಸ್ವಾಗತಿಸಿದರು.
ನಾಗವೇಣಿ ಕೀಗಡಿ ಅವರು ನಿರೂಪಣೆಯನ್ನು ಮಾಡಿದರು. ತಳಲೆ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಕಾಶ್ ಅವರು ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಇಲಾಖೆಯ ಆಶಾಲತಾ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಮಕ್ಕಳು ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಿದರು. ಸಂವಿಧಾನದ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನ ನೀಡಲಾಯಿತು ಮತ್ತು ರಂಗೋಲಿ ಸ್ಪರ್ಧೆಯ ವಿಜೇತರಿಗೂ ಬಹುಮಾನವನ್ನು ನೀಡಲಾಯಿತು.
ಶಿಂಗನ ಬಿದರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಜಾತ, ಸದಸ್ಯರು ಸಂದೇಶ್ ಕೆ ಎನ್, ಶ್ರೀಮತಿ ಕುಸುಮ, ಅಭಿವೃದ್ಧಿ ಅಧಿಕಾರಿ ಭಾಸ್ಕರ್ ಬಿ.ಎಮ್, ಮುಖ್ಯ ಅತಿಥಿ ಮುಡುಬ ರಾಘವೇಂದ್ರ, ಕೀಗಡಿ ಕೃಷ್ಣಮೂರ್ತಿ, ಎನ್ ಆರ್ ಎಂ ಎಲ್ ಪ್ರತೀಕ್, ಸಿ ಆರ್. ಪಿ ಸರಸ್ವತಿ,ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತಿಯಲ್ಲಿದ್ದರು.ಗ್ರಾಮ ಪಂಚಾಯತಿ ಅಧ್ಯಕ್ಷರಾದ ನವೀನ್ ಕುಳ್ಳುಂಡೆ ಅವರು ಸಮಾರಂಭಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದಿಸಿದರು