Categories
ತೀರ್ಥಹಳ್ಳಿ

ಹಣಗೆರೆಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ

ಹಣಗೆರೆಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ
– ಶಾಲಾ ಮಕ್ಕಳ ವೇಷಭೂಷಣ: ಸಂಭ್ರಮದ ಸ್ವಾಗತ
– ಅಂಬೇಡ್ಕರ್, ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ

NAMMUR EXPRESS NEWS
ಹಣಗೆರೆ ಗ್ರಾಮ ಪಂಚಾಯಿತಿಯಲ್ಲಿ ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷ ನಿಮಿತ್ತ ಭಾನುವಾರ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಹಣಗೆರೆ ಯಲ್ಲಿ ಜಾಗೃತಿ ಜಾಥಾ ವಾಹನಗಳ ಮುಖಾಂತರ ಶಾಲಾ ಮಕ್ಕಳ ವೇಷಭೂಷಣ ಹಾಗೂ ಬಲೂನ್ ಮತ್ತು ರಾಷ್ಟ್ರಧ್ವಜಗಳನ್ನು ಒಳಗೊಂಡಂತೆ ಗ್ರಾಮ ಪಂಚಾಯಿತಿ ಆವರಣದವರೆಗೆ ಜಾಥಾದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ವೇದಿಕೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನ ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಸರೋಜಮ್ಮನವರು ಉದ್ಘಾಟಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಬಿ ಎಸ್ ಧರ್ಮಪ್ಪನವರು ಸ್ವಾಗತಿಸಿದರು.

ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಪಿ ಆರ್ ಪಿ ಉಮೇಶ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನ ನೀಡಲಾಯಿತು. ಮತ್ತು ರಂಗೋಲಿ ಸ್ಪರ್ಧೆಯ ವಿಜೇತರಿಗೂ ಅಭಿನಂದನಾ ಪತ್ರ ಮತ್ತು ಬಹುಮಾನವನ್ನು ನೀಡಲಾಯಿತು. ವಂದನಾರ್ಪಣೆಯನ್ನ ಅಭಿವೃದ್ಧಿ ಅಧಿಕಾರಿಗಳಾದ ಬಿ. ಎಸ್ ಧರ್ಮಪ್ಪನವರು ಮಾಡಿದ್ದರು. ಸದಸ್ಯರಾದ ಶ್ರೀಮತಿ ಸರೋಜಮ್ಮ, ಅಶೋಕ, ಸುಮಲತಾ, CRP ಉಮೇಶ್ , ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಎನ್ ಆರ್ ಎಲ್ ಎಮ್ ಒಕ್ಕೂಟದ ಸಿಬ್ಬಂದಿ ವರ್ಗ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತಿಯಲ್ಲಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.