Categories
ತೀರ್ಥಹಳ್ಳಿ

ದೇವಂಗಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಸಂಭ್ರಮ!

ದೇವಂಗಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಸಂಭ್ರಮ!
– ದೇವಂಗಿ ವೃತ್ತ, ಮೊರಾರ್ಜಿ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ
– ಸಾಂಸ್ಕೃತಿಕ ಕಲರವ: ಗ್ರಾಮಸ್ಥರ ಸಹಯೋಗ

NAMMUR EXPRESS NEWS
ತೀರ್ಥಹಳ್ಳಿ: ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮಿತ್ತ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂವಿಧಾನ ಜಾಗೃತಿ ಜಾಥಾ ವಾಹನವನ್ನು ದೇವಂಗಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮೊರಾರ್ಜಿ ಶಾಲೆ ಮತ್ತು ದೇವಂಗಿ ವೃತ್ತದಲ್ಲಿ ದೇವಂಗಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಮಾಡಲಾಯಿತು. ವಾಟಗಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬ್ಯಾಂಡ್ ಸೆಟ್ ಮುಖಾಂತ ದೇವಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ವೇಷ ಭೂಷಣದೊಂದಿಗೆ ಗ್ರಾಮ ಪಂಚಾಯಿತಿಯ ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ಮಕ್ಕಳು ಹಾಗೂ ಜ್ಞಾನ ದರ್ಶಿನಿ ಶಾಲೆ ಹುಲಿಮಂಡೆ ಮುಖ್ಯೋಪಾಧ್ಯಾಯರು ಶಿಕ್ಷಕರು ಮಕ್ಕಳೊಂದಿಗೆ ಮತ್ತು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸಾರ್ವಜನಿಕರೊಂದಿಗೆ ಸಂವಿಧಾನ ಜಾಗೃತಿ ಜಾಥಾ ವಾಹನವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ಡಾ. ಬಿ ಆರ್ ಅಂಬೇಡ್ಕ‌ರ್ ಮತ್ತು ಮಹಾತ್ಮಗಾಂಧೀಜಿಯವರ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಗೆ ಪುಷ್ಪ ನಮನವನ್ನು ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಿರಿಜಾ ಕುಮಾರ್ ಉದ್ಘಾಟಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಎಂ ರೇಣುಕಾರಾಧ್ಯ ಸರ್ವರನ್ನು ಸ್ವಾಗತಿಸಿದರು ಮತ್ತು ವಾಟಗಾರರು ಸರ್ಕಾರಿ ಶಾಲೆ ಶಿಕ್ಷಕಿ ಭಾಗ್ಯ ಇವರು ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು. ದೇವಂಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅನ್ನಪೂರ್ಣ ವಿಜಯ್, ಸದಸ್ಯರಾದ ಅಶೋಕ್ ಕೆಕೆ, ನಾಗರಾಜ್, ಅಮೂಲ್ಯ ಪ್ರದೀಪ್, ಪೂರ್ಣಿಮಾ, ಸರೋಜಾ, ಬಿಕೆ ಮಹೇಶ್, ಸಮಾಜ ಕಲ್ಯಾಣ ಇಲಾಖೆ ಸತೀಶ್ ತಡಿ, ರಾಜೇಂದ್ರ ಪ್ರಸಾದ್, ಪ್ರಾಂಶುಪಾಲರಾದ ಉಮೇಶ್, ಸಿ ಆರ್ ಪಿ ಶ್ರೀನಿವಾಸ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಕುರಿತಾದ ಸಾಕ್ಷ ಚಿತ್ರ ಪ್ರದರ್ಶಿಸಲಾಯಿತು. ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ ಹಾಗೂ ಭಾಷಣ ಕಾರ್ಯಕ್ರಮ ನಡೆಯಿತು. ಸಂವಿಧಾನ ಕುರಿತಾಗಿ ಸಂಕ್ಷಿಪ್ತವಾಗಿ ಶಿಕ್ಷಕರಾದ ಶರತ್ ಕೆ ಸಿ, ಅಣ್ಣಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಕೆ. ಕೆ ಮಾತನಾಡಿದರು. ಸಂವಿಧಾನ ಜಾಗೃತಿ ಜಾಥದ ಗ್ರಾಮ ಪಂಚಾಯಿತಿ ವತಿಯಿಂದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಗೆದ್ದವರಿಗೆ ಬಹುಮಾನ ವಿತರಿಸಲಾಯಿತು. ವಂದನಾರ್ಪಣೆಯನ್ನು ಮುಖ್ಯ ಶಿಕ್ಷಕರಾದ ಭಾರತೀ ಕೆ ಎಸ್ ನೆರವೇರಿಸಿದರು. ನಿರೂಪಣೆಯನ್ನು ಶಿಕ್ಷಕರಾದ ಅನುಪಮ ಹಾಗೂ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಾದ ಸವಿತಾ ಎಂ ಆರ್ ಹಾಗೂ ಸಿಬ್ಬಂದಿ ವರ್ಗ, ನಾಗರಾಜ್ ಯು ಎಸ್, ಮೇಘ ಐ ಎಸ್, ಕಾರ್ತಿಕ್ ಎಚ್ ಡಿ,ಮಯ್ಯದ್ಧಿ, ಚಂದ್ರು, ಶಶಾಂಕ್ ಹಾಗೂ ಇತರರು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.