Categories
ತೀರ್ಥಹಳ್ಳಿ

ತೀರ್ಥಹಳ್ಳಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ..!!

ತೀರ್ಥಹಳ್ಳಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ..!!
– ತೀರ್ಥಹಳ್ಳಿ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಶಾಲೆಗಳಿಗೆ ಮಾತ್ರ ರಜೆ ಘೋಷಣೆ
– ತಹಸೀಲ್ದಾರ್ ರಂಜಿತ್ ಆದೇಶ

NAMMUR EXPRESS NEWS
ತೀರ್ಥಹಳ್ಳಿ : ಇಂದು ತೀರ್ಥಹಳ್ಳಿ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ಹಾಗೂ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ದಿನಾಂಕ 25.07.2025 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿವಸಗಳಲ್ಲಿ ಶಾಲೆಗಳನ್ನು ನಡೆಯಿಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಸೂಚಿಸಿದೆ.
ಹೈ ಸ್ಕೂಲ್ ಹಾಗೂ ಕಾಲೇಜುಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಇವರನ್ನು ಹೊರತುಪಡಿಸಿ ರಜೆಯನ್ನು ಘೋಷಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.