ಆಗುಂಬೆ ಘಾಟಿ ರಸ್ತೆಯಲ್ಲಿ ಬಿರುಕು!?
– ಆ.15ರವರೆಗೆ ಭಾರೀ ವಾಹನ ಸಂಚಾರಕ್ಕೆ ನಿಷೇಧ
– ಮಳೆ ಕಡಿಮೆ: ಉಡುಪಿ ರಜೆ, ದಕ್ಷಿಣ ಕನ್ನಡ, ಮಲೆನಾಡು ಶಾಲಾ ಕಾಲೇಜುಗಳಿಗೆ ರಜೆ ಇಲ್ಲ!
NAMMUR EXPRESS NEWS
ತೀರ್ಥಹಳ್ಳಿ/ಉಡುಪಿ: ( Agumbe ghat ) ಕಳೆದೊಂದು ವಾರದಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತೀರ್ಥಹಳ್ಳಿ – ಉಡುಪಿ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಸಣ್ಣ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಅಲ್ಲಲ್ಲಿ ಕುಸಿಯುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಜುಲೈ 27 ರಿಂದ ಅಗಸ್ಟ್ 15ರ ವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಉಡುಪಿ ಜಿಲ್ಲಾದಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ೧೬೯ ಎ ಹಾದು ಹೋಗಿರುವ ಆಗುಂಬೆ ಘಾಟ್ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರದಿಂದಲೇ ಬಿರುಕು ಹಾಗೂ ಭೂ ಕುಸಿತ ಉಂಟಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದಾಗಿ ಇದೀಗ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಲಘು ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಘನ ವಾಹನಗಳು ಬದಲಿ ಮಾರ್ಗವನ್ನು ಬಳಸಿಕೊಂಡು ಸಂಚರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಬದಲಿ ಮಾರ್ಗಗಳು ಎಲ್ಲೆಲ್ಲಿ?
ಆಗುಂಬೆ ಘಾಟ್ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿರುವ ಬೆನ್ನಲ್ಲೇ ಬದಲಿ ಮಾರ್ಗವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. ಉಡುಪಿಯಿಂದ ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವ ವಾಹನಗಳು ತೀರ್ಥಹಳ್ಳಿ – ಆಗುಂಬೆ- ಶೃಂಗೇರಿ – ಮಾಳಾಘಾಟ್- ಕಾರ್ಕಳ- ಉಡುಪಿ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ಅಲ್ಲದೇ ತೀರ್ಥಹಳ್ಳಿ – ಮಾಸ್ತಿಕಟ್ಟೆ-ಸಿದ್ದಾಪುರ – ಕುಂದಾಪುರ- ಉಡುಪಿ ಮಾರ್ಗದಲ್ಲಿಯೂ ಸಂಚಾರ ಮಾಡಬಹುದಾಗಿದೆ.
ಮಲೆನಾಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ!
– ಉಡುಪಿ ಜಿಲ್ಲೆ ರಜೆ, ದಕ್ಷಿಣ ಕನ್ನಡಕ್ಕಿಲ್ಲ
ರಾಜ್ಯದಲ್ಲಿ ಮಳೆ ಕೊಂಚ ಕಡಿಮೆ ಆದ ಹಿನ್ನೆಲೆಯಲ್ಲಿ ಮಳೆಯ ಅಬ್ಬರ ಕಡಿಮೆ ಆಗಿರುವ ಹಿನ್ನೆಲೆ
ನಾಳೆಯಿಂದ ಶಾಲಾ ಕಾಲೇಜುಗಳು ಎಂದಿನಂತೆ ಅರಂಭವಾಗಲಿದೆ. ಹೆಚ್ಚಿನ ಮಳೆಯಿಂದ ಸಮಸ್ಯೆ ಇರುವ ಶಾಲೆಗಳಿಗೆ ಆಯಾಯ ವ್ಯಾಪ್ತಿಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳೇ ರಜೆ ಘೋಷಣೆ ಮಾಡಲು ಅದೇಶ ಮಾಡಲಾಗಿದೆ. ಆದ್ರೆ ಎಲ್ಲಿಯೂ ಬುಧವಾರ ಹೆಚ್ಚು ಮಳೆ ಆದ ವರದಿ ಆಗಿಲ್ಲ.
ಇದನ್ನೂ ಓದಿ : ಖಾಸಗಿ ಚಾನಲ್ ವಿರುದ್ದ ಕಿಮ್ಮನೆ 5 ಕೋಟಿ ಕೇಸ್!?
HOW TO APPLY : NEET-UG COUNSELLING 2023