ಡಿ. 29ರಂದು ಕುಪ್ಪಳ್ಳಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ!
– ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನದ ಕಾರಣ ಶೋಕ ಆಚರಣೆ: ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ರದ್ದು
– ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಭೇಟಿ ಕೂಡ ರದ್ದು
– ಕುವೆಂಪು ಸಮಾಧಿಗೆ ನಮನ: ಪ್ರತಿಷ್ಠಾನದ ಮಾಹಿತಿ
NAMMUR EXPRESS NEWS
ತೀರ್ಥಹಳ್ಳಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ರಾಷ್ಟಕವಿ ಕುವೆಂಪು ಪ್ರತಿಷ್ಟಾನ ಕುಪ್ಪಳಿ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ಅವರ 120 ನೇ ಜನ್ಮ ದಿನೋತ್ಸವ ಅಂಗವಾಗಿ ಡಿ. 29 ರಂದು ಬೆಳಗ್ಗೆ 10 ಗಂಟೆಗೆ ಕವಿಶೈಲದಲ್ಲಿ ಕವಿನಮನ ಹಾಗೂ ಬೆಳಗ್ಗೆ 11 ಗಂಟೆಗೆ ಕುಪ್ಪಳಿಯ ಹೇಮಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನದ ಕಾರಣ ಶೋಕ ಆಚರಣೆ ಇರುವುದರಿಂದ ಸಾಂಸ್ಕೃತಿಕ ಹಾಗು ಸಭಾ ಕಾರ್ಯಕ್ರಮ ರದ್ದಾಗಿದೆ. ಉಪಮುಖ್ಯಮಂತ್ರಿ ಡಿ ಕೆ ಶಿವುಕುಮಾರ್ ಭೇಟಿ ಕೂಡ ನಿಗದಿಯಾಗಿತ್ತು ಅದು ಕೂಡ ರದ್ದಾಗಿದೆ. ಕಾರ್ಯಕ್ರಮಗಳು ಯಾವುದು ಇರುವುದಿಲ್ಲ ಕುಪ್ಪಳ್ಳಿಯಲ್ಲಿ ಕುವೆಂಪು ಅವರ ಸಮಾಧಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಇರುತ್ತದೆ ಎಂದು ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಿಳಿಸಿದ್ದಾರೆ.