ಆಗುಂಬೆ ಘಾಟಿಯಲ್ಲಿ 30 ಅಡಿ ಪ್ರಪಾತಕ್ಕೆ ಬಿದ್ದ!
– ಘಾಟಿ ಮೇಲೆ ನಿಂತಿದ್ದವನಿಗೆ ಗುದ್ದಿದ ಟ್ರಾಕ್ಟರ್
– ಹಿಂದೂ ಜಾಗರಣೆ ವೇದಿಕೆಯ ಸದಸ್ಯರಿಂದ ರಕ್ಷಣೆ
– ಮೇಗರವಳ್ಳಿಯಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ
7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನಡೆದಿದೆ. ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದು ಈಗ ಅವರ ಕೆಲಸ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.
ಮಹಮ್ಮದ್ ಪಾಷಾ ಎಂಬಾತ ರಸ್ತೆ ಬದಿಯಲ್ಲಿದ್ದ. ಈ ವೇಳೆ ಹಾಳಾಗಿದ್ದ ಗಾಡಿಯನ್ನು ಟ್ರ್ಯಾಕ್ಟರ್ ಅಲ್ಲಿ ಟೋಯಿಂಗ್ ಮಾಡ್ತಿದ್ದ ವೇಳೆ ಗಾಡಿ ಬ್ರೇಕ್ ಫೇಲ್ ಆದ ಹಿನ್ನೆಲೆ ಮಹಮ್ಮದ್ ಪಾಷಾ ಅವರಿಗೆ ಗುದ್ದಿದ ಕಾರಣ ಈ ಅವಘಡ ಸಂಭವಿಸಿದೆ. ಆಗುಂಬೆ ಘಾಟ್ ನಿಂದ 25 ರಿಂದ 30 ಅಡಿ ಕೆಳಗಡೆ ಬಿದ್ದ ಮಹಮ್ಮದ್ ಪಾಷಾಗೆ ಗಂಭೀರ ಗಾಯವಾಗಿದ್ದು ಮೇಲಿನಿಂದ ಬಿದ್ದ ರಭಸಕ್ಕೆ ಪಾಷಾ ಅವರ ಸೊಂಟ ಮತ್ತು ತಲೆಗೆ ಪೆಟ್ಟು ಬಿದ್ದಿದೆ. ಕೂಡಲೇ ಸ್ಥಳದಲ್ಲಿದ್ದಲಿದ್ದ ಹಿಂದೂ ಜಾಗರಣೆ ವೇದಿಕೆಯ ಸದಸ್ಯರು ಮಹಮ್ಮದ್ ಪಾಷಾರನ್ನ ರಕ್ಷಣೆ ಮಾಡಿದ್ದಾರೆ.
– ಮೇಗರವಳ್ಳಿಯಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಮೇಗರವಳ್ಳಿ ಗ್ರಾಮದ ಶಾಲಾ ಮೈದಾನದಲ್ಲಿ ಕೆಲವು ಜನರು ಸೇರಿಕೊಂಡು ಕಾನೂನು ಬಾಹೀರವಾಗಿ ಇಸ್ಪೀಟು ಜೂಜಾಟ ಆಡುತ್ತಿದ್ದವರ ವಿರುದ್ಧ ಕೇಸು ದಾಖಲಾಗಿದೆ.
ಡಿವೈಎಸ್ಪಿ ಗಜಾನನ ವಾಮನ ಸುತಾರ, ಪಿ ಎಸ್ ಐ ರಂಗನಾಥ್, ಗಾದಿಲಿಂಗಪ್ಪ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಅಕ್ರಮವಾಗಿ ಇಸ್ಪೀಟು ಜೂಜಾಟ ಆಡುತ್ತಿದ್ದ 10 ಜನ ಆರೋಪಿತರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಜೂಜಾಟದಲ್ಲಿ ಪಣವಾಗಿಟ್ಟಿದ್ದ ರೂ 25,300/- ನಗದು ಹಣ ಮತ್ತು ಇಸ್ಪೀಟು ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ : ತುಂಬಿದ ನದಿಯಲ್ಲಿ ಮರ ಹಿಡಿದು ಜೀವ ಉಳಿಸಿಕೊಂಡ ಅಜ್ಜಿ!
HOW TO APPLY : NEET-UG COUNSELLING 2023