ಶಿವಮೊಗ್ಗ ಜಿಲ್ಲೆಯಲ್ಲಿ ಡಿಜೆ ಸಿಸ್ಟಮ್ ನಿಷೇಧ!
* ಸಾರ್ವಜನಿಕರ ಹಿತ ದೃಷ್ಟಿಗಾಗಿ ನಿರ್ಧಾರ
* ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ
NAMMUR EXPRESS NEWS
ತೀರ್ಥಹಳ್ಳಿ: ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಆಚರಣೆ ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಮ್ ಬಳಕೆ ನಿಷೇಧವಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಸೆ.7ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಆಚರಣೆ ಮಾಡಲಾಗಲಗುತ್ತದೆ. ಹಾಗೆಯೇ ಸೆ.16ರಂದು ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದಾರೆ.
ಈ ಸಂದರ್ಭದಲ್ಲಿ ಡಿಜೆ ಸಿಸ್ಟಮ್ ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯ್ರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ದಕ್ಕೆಯುಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಸೌಹಾರ್ದತೆ ಮತ್ತು ಶಾಂತಿಯನ್ನು ಕಾಪಾಡಲು ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಮ್ ಗಳನ್ನು ನಿಷೇಧ ಗೊಳಿಸುವುದಾಗಿ ಜಿಲ್ಲಾಧಿಕಾರಿಗಳು ಮತ್ತು ದಂಡಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ. ಎಲ್ಲಾ ಗಣೇಶ ಆಯೋಜಕರು ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು ಎಂದು
ಪತ್ರಿಕಾಗೋಷ್ಠಿಯಲ್ಲಿ ಡಿ ವೈ ಎಸ್ ಪಿ ಗಜಾನನ ವಾಮನ ಸುತಾರ ,ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರಮುಖರು ಹಾಜರಿರಲಿದ್ದಾರೆ.