ಡಿ.29ಕ್ಕೆ ತೀರ್ಥಹಳ್ಳಿಗೆ ಡಿಕೆಶಿ ಆಗಮನ?
– ಕುವೆಂಪು ಜನ್ಮ ದಿನೋತ್ಸವಕ್ಕೆ ಉಪ ಮುಖ್ಯಮಂತ್ರಿ ಭೇಟಿ
– ಕುಪ್ಪಳಿಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ
NAMMUR EXPRESS NEWS
ತೀರ್ಥಹಳ್ಳಿ: ಕುವೆಂಪು ಜನ್ಮ ದಿನದ ಅಂಗವಾಗಿ ತೀರ್ಥಹಳ್ಳಿ ತಾಲೂಕು ಕುಪ್ಪಳಿಯಲ್ಲಿ ನಡೆಯಲಿರುವ ಕುವೆಂಪು ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ನೀಡಲಿದ್ದಾರೆ. ಕೊಪ್ಪ ಅಥವಾ ಗಡಿಕಲ್ ಮೈದಾನದಲ್ಲಿ ಹೆಲಿ ಕಾಪ್ಟರ್ ಮೂಲಕ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಕುಪ್ಪಳಿಗೆ ಆಗಮಿಸಲಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.