Categories
ತೀರ್ಥಹಳ್ಳಿ

ಕುಡಿಯುವ ನೀರಿನ ಸಮಸ್ಯೆ: ಆಡಳಿತ ಅಲರ್ಟ್!

ಕುಡಿಯುವ ನೀರಿನ ಸಮಸ್ಯೆ: ಆಡಳಿತ ಅಲರ್ಟ್!
– ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಶಾಸಕ ಆರಗ ಜ್ಞಾನೇಂದ್ರ

ಡಿ.ಕೆ.ಶಿವಕುಮಾರ್ ವಿರುದ್ಧ ತೀರ್ಥಹಳ್ಳಿ ಬಿಜೆಪಿಯಿಂದ ಪ್ರತಿಭಟನೆ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನಲ್ಲಿ ಅತಿಯಾದ ಬೇಸಿಗೆಯಿಂದ ಜನರಿಗೆ ಮುಂದಿನ ಮೂರು ತಿಂಗಳಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಲು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
ಮಾರ್ಚ್ 26ರಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಕುರಿತಾಗಿ ಎಲ್ಲಾ ಪಂಚಾಯಿತಿಯ ಪಿಡಿಓಗಳು,ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಣಾಧಿಕಾರಿ,ಕುಡಿಯುವ ನೀರು ಇಲಾಖೆ ಇಂಜಿನಿಯರ್ ಅಣ್ಣಪ್ಪ, ಮೆಸ್ಕಾಂ ಎಇಇ ಪ್ರಶಾಂತ್ ಹಾಗೂ ಮತ್ತಿತರ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲ್ಲೂಕಿನಾದ್ಯಂತ ಮುಂದಿನ ಮೂರು ತಿಂಗಳಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಅಧಿಕಾರಿಗಳಿಗೆ ಎಚ್ಚರವಹಿಸುವಂತೆ ಸೂಚಿಸಿದರು.

ಡಿ.ಕೆ.ಶಿವಕುಮಾರ್ ವಿರುದ್ಧ ತೀರ್ಥಹಳ್ಳಿ ಬಿಜೆಪಿಯಿಂದ ಪ್ರತಿಭಟನೆ

ತೀರ್ಥಹಳ್ಳಿ : ಈ ಬಾರಿಯ ಬಜೆಟ್‌ನಲ್ಲಿ ಮುಸ್ಲಿಂರಿಗೆ ಅತೀ ಹೆಚ್ಚಿನ ಅನುದಾನ ನೀಡಿ ಕಾಮಗಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಲು ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತಾಲೂಕು ಬಿಜೆಪಿ ವತಿಯಿಂದ ಮಾ. 25ರಂದು ಪಟ್ಟಣದ ಕುವೆಂಪು ವೃತ್ತದ ಬಳಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಗೃಹ ಸಚಿವರೂ, ಹಾಲಿ ಶಾಸಕರಾದ ಆರಗ ಜ್ಞಾನೇಂದ್ರರು ಕಾಂಗ್ರೆಸ್ ಪಕ್ಷ ಇದೂವರೆಗೆ ದೇಶದ ಒಳಿತಿಗಾಗಿ ಏನನ್ನೂ ಮಾಡದೆ ತನ್ನ ಪಕ್ಷದ ಹಿತಕ್ಕಾಗಿ ಹಲವಾರು ಬಾರಿ ಸಂವಿಧಾನ ಉಲ್ಲಂಘನೆ ಮಾಡಿದೆ. ಈಗ ಕೇವಲ ಮುಸ್ಲಿಂರ ಓಲೈಕೆಗಾಗಿ ಬಜೆಟ್‌ ನಲ್ಲಿ ಕೋಟ್ಯಾಂತರ ರೂಗಳ ಅನುದಾನ ನೀಡಿ ಕಾಮಗಾರಿ ಗುತ್ತಿಗೆಯಲ್ಲೂ 4% ಪರ್ಸೆಂಟ್ ನೀಡಲು ಹೊರಟಿರುವುದು ರಾಜ್ಯಕ್ಕೆ ದೊಡ್ಡ ದುರಂತವಾಗುವುದರಲ್ಲಿ ಸಂದೇಹವೇ ಇಲ್ಲ. ಇದಕ್ಕಾಗಿ ಸಂವಿಧಾನವನ್ನೇ ಬದಲಾಯಿಸುತ್ತೇನೆಂದು ಹೇಳಿಕೆ ನೀಡಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಅದರಂತೆ ತೀರ್ಥಹಳ್ಳಿ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಾಗಿದೆ. ಹಿಂದೂ ಬಾಂಧವರನ್ನು ಎರಡನೇ ದರ್ಜೆಯವರನ್ನಾಗಿ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆಂದು ಹೇಳಿದರು.
ಮುಸ್ಲಿಂ ಮೀಸಲಾತಿಗಾಗಿ ಸಂವಿಧಾನವನ್ನೇ ಬದಲಾಯಿಸುತ್ತೇನೆಂದು ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ತಲೆಯೇ ಇಲ್ಲದ ಮಾನವ ಆಕೃತಿಯ ಪ್ರತಿಕೃತಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮಂಡಲ ಅಧ್ಯಕ್ಷ ಹೆದ್ದೂರು ನವೀನ್‌ರವರ ಉಸ್ತುವಾರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಯಶೋಧ ಮಂಜುನಾಥ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸಂತೋಷ ದೇವಾಡಿಗ ತುಡ್ಕಿ , ಪಟ್ಟಣ ಪಂಚಾಯಿತಿ ಸದಸ್ಯ ಸಂದೇಶ ಜವಳಿ, ತೂದೂರು ಮಧುರಾಜ್ ಹೆಗ್ಡೆ, ಗಬಡಿ ಪ್ರದೀಪ್,
ಹಾರೋಗೊಳಿಗೆ ವಾಸುದೇವ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.