- ತೀರ್ಥಹಳ್ಳಿಯ ವಾಗ್ದೇವಿ ಶಾಲೆಯ ವಿದ್ಯಾರ್ಥಿನಿ
- ಹಲವು ಗಾಯನ, ರಿಯಾಲಿಟಿ ಶೋಗಳಲ್ಲಿ ಸ್ಪರ್ಧೆ
- ಶ್ರೀ ರಾಜರಾಜೇಶ್ವರಿ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ವರ್ಷಿಣಿ ಪಿ ಭಟ್ ಸೋಮವಾರ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವರ್ಷಿಣಿ ಕಟ್ಟೆಹಕ್ಕಲು ಸಮೀಪದ ಪಟ್ಲಮನೆಯ ಪ್ರಕಾಶ್ ಭಟ್ ಮತ್ತು ಲಲಿತಾ ಇವರ ಪುತ್ರಿಯಾಗಿದ್ದು, ಇವರಿಗೆ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಶುಭಕೋರಿದ್ದಾರೆ.
ಮಲೆನಾಡಿನ ಖ್ಯಾತ ಗಾಯಕಿಯಾಗುವ ಎಲ್ಲಾ ಅರ್ಹತೆ ಹೊಂದಿರುವ ವರ್ಷಿಣಿ ಭಟ್ ಅವರು ಈಗಾಗಲೇ ಹಲವು ಸ್ಪರ್ಧೆ, ಗಾಯನ, ರಿಯಾಲಿಟಿ ಶೋಗಳಲ್ಲಿ ಗೆಲುವು ಸಾಧಿಸಿದ್ದಾರೆ.
ವರ್ಷಿಣಿ ಭಟ್ ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ. ಇನ್ನೂ ಅನೇಕ ಪ್ರಶಸ್ತಿಗಳು ದೊರೆಯಲಿ ಎಂದು ನಮ್ಮೂರ ಎಕ್ಸ್ಪ್ರೆಸ್ ಮಾಧ್ಯಮ ಆಶಿಸುತ್ತದೆ.
ಮನಸ್ವಿ ಭಟ್ ಪ್ರಥಮ ಸ್ಥಾನ, ಅಪೇಕ್ಷ ತೃತೀಯ ಸ್ಥಾನ: ತೀರ್ಥಹಳ್ಳಿ ತಾಲೂಕು ಮಟ್ಟದ ಹೈಸ್ಕೂಲ್ ವಿಭಾಗದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ಶ್ರೀ ರಾಜರಾಜೇಶ್ವರಿ ನೃತ್ಯ ಕಲಾ ಕೇಂದ್ರದ ವಿದ್ಯಾರ್ಥಿನಿಯರಾದ ಮನಸ್ವಿ ಭಟ್ ಪ್ರಥಮ ಸ್ಥಾನವನ್ನು ಮತ್ತು ಅಪೇಕ್ಷ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ವಿಧುಷಿ ಅರುಂಧತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ