ಗೊಬ್ಬರದ ಬೆಲೆ ಹೆಚ್ಚಳ: ಕೇಂದ್ರದ ವಿರುದ್ದ ಕಾಂಗ್ರೆಸ್ ಹೋರಾಟ!
– ಶಿವಮೊಗ್ಗ, ತೀರ್ಥಹಳ್ಳಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
– ತೀರ್ಥಹಳ್ಳಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
NAMMUR EXPRESS NEWS
ಶಿವಮೊಗ್ಗ/ ತೀರ್ಥಹಳ್ಳಿ: ಕೇಂದ್ರ ಸರ್ಕಾರ ಗೊಬ್ಬರದ ಬೆಲೆ ಹೆಚ್ಚಳ ಮಾಡಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಹೋರಾಟಕ್ಕೆ ಇಳಿದಿದೆ.
ಶಿವಮೊಗ್ಗ, ತೀರ್ಥಹಳ್ಳಿ ಸೇರಿ ಅನೇಕ ಕಡೆ ಯುವ ಕಾಂಗ್ರೆಸ್ ಪ್ರತಿಭಟನೆ ಮಾಡಿದೆ.
ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಗೊಬ್ಬರದ ಬೆಲೆ ಹೆಚ್ಚಳ ಮಾಡಿ, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ವರ್ಷ ಇಫ್ಕೊ ರಸಗೊಬ್ಬರ ಪ್ರತಿ ಚೀಲಕ್ಕೆ ₹1250 ಇತ್ತು. ಈ ವರ್ಷ ₹1650ಕ್ಕೆ ಏರಿಕೆಯಾಗಿದೆ.
ಆರ್‌ಸಿಎಫ್ ಗೊಬ್ಬರ ₹1470 ರಿಂದ ₹1650ಕ್ಕೆ ಏರಿಕೆಯಾಗಿದೆ. ಹೀಗೆ ಪ್ರತಿ ಮಾದರಿಯ ಗೊಬ್ಬರದ ದರವು ಹೆಚ್ಚಳವಾಗಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಾಂತರ ಕಾಂಗ್ರೆಸ್ ಹೋರಾಟದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಗ್ರಾಮಾಂತರ ಅಧ್ಯಕ್ಷ ಪ್ರವೀಣ್.ಎಸ್, ಪ್ರಮುಖರಾದ ಮಧುಸೂದನ್, ಚೇತನ್, ಬ್ಲಾಕ್ ಅಧ್ಯಕ್ಷ ಶಶಿಕುಮಾರ್.ಕೆ.ಆರ್, ಪ್ರವೀಣ್, ಪ್ರಧಾನ ಕಾರ್ಯದರ್ಶಿ ಶಿವು, ಅಬ್ದುಲ್ಲಾ, ಚರಣ್, ತೌಫಿಕ್, ಗಿರೀಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತೀರ್ಥಹಳ್ಳಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್
ತೀರ್ಥಹಳ್ಳಿಯ ತಾಲೂಕು ಕಚೇರಿ ಎದುರು ಕೇಂದ್ರ ಸರ್ಕಾರ ಗೊಬ್ಬರದ ಬೆಲೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ಮಾಡಿದೆ.
ಯುವ ಕಾಂಗ್ರೆಸ್ ಅಧ್ಯಕ್ಷರಾದ ಪೂರ್ಣೇಶ್ ಕೆಳಕೆರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್,
ಕಾಂಗ್ರೆಸ್ ಯುವ ನಾಯಕರಾದ ಅಶ್ವಲ್, ಶ್ರೇಯಸ್, ಪಣಿರಾಜ್, ರವಿಕುಮಾರ್, ಮಂಜುನಾಥ್ ಶೆಟ್ಟಿ, ದೀಪು ಸಿಂದುವಾಡಿ, ಶ್ರೀಕಾಂತ್ ಬೆಟ್ಟಮಕ್ಕಿ ಸೇರಿ ಹಲವರು ಇದ್ದರು.
