ಕಾರ್ಕಳ ಮಾಜಿ ಶಾಸಕರ ಪುತ್ರ ರೈಲಿಗೆ ತಲೆ ಕೊಟ್ಟು ಸಾವು!
– ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್
– ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
NAMMUR EXPRESS NEWS
ಕಾರ್ಕಳ: ಕಾರ್ಕಳದ ಮಾಜಿ ಶಾಸಕ ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಅವರು ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದೀಪ್ ಹೆಬ್ರಿ ತಾಲೂಕು ನಿವಾಸಿಯಾಗಿದ್ದಾರೆ. ಸುದೀಪ್ ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದೀಪ್ ತಂದೆ ಹೆಚ್.ಗೋಪಾಲ್ ಭಂಡಾರಿ ಅವರು 1999ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ನಂತರ 2008ರಲ್ಲಿಯೂ ಎರಡನೇ ಬಾರಿ ಶಾಸಕರಾಗಿದ್ದಾರೆ. ಹೆಚ್.ಗೋಪಾಲ್ ಭಂಡಾರಿ ಅವರು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಗೋಪಾಲ್ ಭಂಡಾರಿ ಅವರಿಗಿಂತ ಮುಂಚೆ ಈ ಕ್ಷೇತ್ರವನ್ನು ವೀರಪ್ಪ ಮೊಯ್ಲಿ ಪ್ರತಿನಿಧಿಸುತ್ತಿದ್ದರು. ಬಿಜೆಪಿಯ ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅತ್ಯಂತ ಪ್ರಾಮಾಣಿಕ ನಾಯಕರಾಗಿದ್ದ ಭಂಡಾರಿ ಅವರು ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು.
ಮೃತ ಸುದೀಪ್ ಭಂಡಾರಿ ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.








