Categories
ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ಮೇ 10ಕ್ಕೆ ಉಚಿತ ಆರೋಗ್ಯ ಶಿಬಿರ

ತೀರ್ಥಹಳ್ಳಿಯಲ್ಲಿ ಮೇ 10ಕ್ಕೆ ಉಚಿತ ಆರೋಗ್ಯ ಶಿಬಿರ
– ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ಮಲ್ನಾಡೋತ್ಸವ ಅಂಗವಾಗಿ
ಉಚಿತ ಆರೋಗ್ಯ ಶಿಬಿರ
– ವಾಕಿಂಗ್ ಬಡ್ಡಿಸ್ ಮತ್ತು ದಾನಿಗಳ ಸಹಯೋಗದಲ್ಲಿ ಕಾರ್ಯಕ್ರಮ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ನಮ್ಮೂರ್ ಎಕ್ಸ್ ಪ್ರೆಸ್ ಮಾಧ್ಯಮ ಸಂಸ್ಥೆಯ ಹತ್ತನೇ ವರ್ಷದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮೇ 10ರ ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ತೀರ್ಥಹಳ್ಳಿಯ ವಾಕಿಂಗ್ ಬಡ್ಡಿಸ್ ಹಾಗೂ ಪ್ರಮುಖ ದಾನಿಗಳ ಸಹಕಾರದಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ತೀರ್ಥಹಳ್ಳಿಯ ರೋಟರಿ ಬ್ಲಡ್ ಬ್ಯಾಂಕ್ ಹಾಗೂ ಶಿವಮೊಗ್ಗದ ನಾರಾಯಣ ಹೃದಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ಸಮಸ್ತ ಜನತೆ ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಉಚಿತ ತಪಾಸಣೆಯಲ್ಲಿ ವೈದ್ಯರ ತಪಾಸಣೆ

ಉಚಿತ ಆರೋಗ್ಯ ತಪಾಸಣೆಯಲ್ಲಿ ಬಿಪಿ, ಶುಗರ್, ಬ್ಲಡ್, ಹಾಗೂ ಹೃದಯ ಸಂಬಂಧಿ ರೋಗಗಳು ಸೇರಿದಂತೆ ಪ್ರಮುಖ ರೋಗಗಳ ಉಚಿತ ತಪಾಸಣೆ ಮಾಡಲಾಗುವುದು. ಜೊತೆಗೆ ರಕ್ತದಾನ ಶಿಬಿರವನ್ನು ನಡೆಸಲಾಗುವುದು. ನುರಿತ ವೈದ್ಯರಿಂದ ಆಪ್ತ ಸಮಾಲೋಚನೆ ಕೂಡ ಇರಲಿದೆ.

ದಿನಾಂಕ : ಮೇ 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ
ಸ್ಥಳ: ಶಾಂತವೇರಿ ಗೋಪಾಲಗೌಡ ರಂಗಮಂದಿರ ಆವರಣ ತೀರ್ಥಹಳ್ಳಿ

ಸಮಸ್ತ ಜನತೆಗೆ ಸುಸ್ವಾಗತ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.