ಜ.21ರಂದು ತುಂಗಾ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆ
– ಕಾಲೇಜಿನ ಅಭಿವೃದ್ಧಿ ಬಗ್ಗೆ ಹಲವು ಚರ್ಚೆ
– ಸರ್ವರಿಗೂ ಸ್ವಾಗತ ಮಾಡಿದ ಸಂಘ
NAMMUR EXPRESS NEWS
ತೀರ್ಥಹಳ್ಳಿ: ಜನವರಿ 21ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ತುಂಗಾ ಮಹಾವಿದ್ಯಾಲಯದ ಸಮ್ಮೇಳನ ಸಭಾಂಗಣದಲ್ಲಿ ತುಂಗಾ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಸಂಘದ ಸರ್ವ ಸದಸ್ಯರ ಮಹಾಸಭೆಯನ್ನು ನೆಂಪೆ ದೇವರಾಜ್ ಇವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯರೆಲ್ಲರೂ ಪಾಲ್ಗೊಳ್ಳುವಂತೆ ಖಜಾಂಚಿ ಶ್ರೀಕಾಂತ್ ಭಟ್, ಕಾರ್ಯದರ್ಶಿ ಪ್ರೊ.ಕೆ.ಟಿ.ರಮೇಶ್ ಕೋರಿದ್ದಾರೆ.