Categories
ತೀರ್ಥಹಳ್ಳಿ

ಗೋವಾ ಬಸ್ ಡಿಕ್ಕಿ: ಬೆಜ್ಜವಳ್ಳಿಯಲ್ಲಿ ಬಾಲಕ ಬಲಿ!

ಗೋವಾ ಬಸ್ ಡಿಕ್ಕಿ: ಬೆಜ್ಜವಳ್ಳಿಯಲ್ಲಿ ಬಾಲಕ ಬಲಿ!
– ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮುಂಜಾನೆ ಘಟನೆ
– ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವು

NAMMUR EXPRESS NEWS
ತೀರ್ಥಹಳ್ಳಿ: ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದರುವ ಘಟನೆ ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಪ್ರಥಮ್ ಮೃತ ವಿದ್ಯಾರ್ಥಿ. ತೀರ್ಥಹಳ್ಳಿ ತಾಲೂಕು ತನಿಕಲ್‌ನ ಪಾಂಡ್ಯ ಗ್ರಾಮದವನು. ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೋವಾ ನೋಂದಣಿಯ ಬಸ್ಸು ಮಂಗಳೂರಿನಿಂದ ಸಕ್ರೆಬೈಲು ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಬೆಜ್ಜವಳ್ಳಿ ಬಳಿ ಡಿಪ್ಲೋಮಾ ವಿದ್ಯಾರ್ಥಿ ಪ್ರಥಮ್ ಎಂಬಾತನಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪ್ರಥಮ್‌ನನ್ನು ಕೂಡಲೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇತ್ತೀಚಿಗೆ ತೀರ್ಥಹಳ್ಳಿ ಮಾರ್ಗದಲ್ಲಿ ಬಸ್ ಸೇರಿದಂತೆ ವಾಹನಗಳ ಅತಿಯಾದ ವೇಗ ಹಲವರ ಬಲಿ ಪಡೆದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.