ಗ್ಯಾರಂಟಿ ಯೋಜನೆ ಸಮಿತಿಯ ಕಚೇರಿ ಉದ್ಘಾಟನೆಗೆ ಸಜ್ಜು
– ತೀರ್ಥಹಳ್ಳಿಯ ಗ್ರಾಮೀಣಾಭಿವೃದ್ಧಿ ಸೌಧದಲ್ಲಿ ಸೆ.6 ರಂದು ಉದ್ಘಾಟನೆ
– ತೀರ್ಥಹಳ್ಳಿ ತಾಲೂಕಿನ ಪಲಾನುಭವಿಗಳ ಮಾಹಿತಿ ನೀಡಿದ ಸಮಿತಿ ಅಧ್ಯಕ್ಷ ನಾಬಳ ಶಚ್ಚೀಂದ್ರ ಹೆಗ್ಡೆ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಗ್ರಾಮೀಣಾಭಿವೃದ್ಧಿ ಸೌಧದಲ್ಲಿ ಸೆ.6 ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ತಾಲೂಕು ಮೇಲ್ವಿಚಾರಣ ಸಮಿತಿಯ ಕಚೇರಿ ಉದ್ಘಾಟನೆ ನಡೆಯಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ವಿವರ ನೀಡಿದ ಸಮಿತಿ ಅಧ್ಯಕ್ಷ ನಾಬಳ ಶಚ್ಚೀಂದ್ರ ಹೆಗ್ಡೆ ತಾಲೂಕಿನ ಸರ್ವರಿಗೂ ರಾಜ್ಯ ಸರ್ಕಾರದ ಯೋಜನೆಯನ್ನು ತಲುಪಿಸಲು ತೀರ್ಥಹಳ್ಳಿಯ ಗ್ರಾಮೀಣಾಭಿವೃದ್ಧಿ ಸೌಧದಲ್ಲಿ ಸೆ.6 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ತಾಲೂಕು ಮೇಲ್ವಿಚಾರಣ ಸಮಿತಿಯ ಕಚೇರಿ ಉದ್ಘಾಟನೆಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ತೀರ್ಥಹಳ್ಳಿಯ ಗಾಂಧಿ ಭವನದಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಚ್ಚೀಂದ್ರ ಹೆಗ್ಡೆ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಆರಂಭವಾಗ ಒಂದು ವರ್ ಮುಗಿದಿದ್ದು, ಕಳೆದ ಒಂದು ವರ್ಷದಲ್ಲಿ ಯೋಜನೆಗಳ ಪ್ರಯೋಜನ ಪಡೆದಿರುವ ಫಲಾನುಭವಿಗಳ ವಿವರ ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯಡಿ ತಾಲೂಕಿನಲ್ಲಿ ಕಳೆದ ಒಂದ ವರ್ಷದಲ್ಲಿ ಒಟ್ಟು ಸುಮಾರು 31,270 ಮಹಿಳಾ ಫಲಾನುಭವಿಗಳು ಪ್ರಯೋಜನ ಪಡೆದಿದ್ದು, 73 ಕೋಟಿ 24 ಲಕ್ಷ ರೂ. ಗಳನ್ನು ವಿತರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಕಳೆದೊಂದು ವರ್ಷದಲ್ಲಿ ತೀರ್ಥಹಳ್ಳಿ ತಾಲೂಕಿನಲ್ಲಿ 42,136 ಫಲಾನುಭವಿಗಳಿಗೆ 18.92 ಕೋಟಿ ಸಬ್ಸಿಡಿ ನೀಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಸರ್ಕಾರದ ಯುವ ನಿಧಿ, ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳ ವಿವರಗಳನ್ನೂ ಶಚ್ಚೀಂದ್ರ ಹೆಗ್ಡೆ ನೀಡಿದರು.
ದೇಶದಲ್ಲೇ ಕ್ರಾಂತಿ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಪಂಚ ಯೋಜನೆಗಳ ಕುರಿತು ತಾಲೂಕಿನ ಜನರಿಗೆ ಪರಿಣಾಮಕಾರಿಯಾಗಿ ಮನದಟ್ಟು ಮಾಡಲು ತಾಲೂಕು ಮೇಲ್ವಿಚಾರಣ ಸಮಿತಿ ಶಕ್ತಿಮೀರಿ ಪ್ರಯತ್ನಿಸುವುದಾಗಿ ಅಧ್ಯಕ್ಷರು ಈ ಸಂದರ್ಭದಲ್ಲಿ ನುಡಿದರು. ಕಾಂಗ್ರೆಸ್ ಮುಖಂಡರಾದ ಡಿ.ಎಸ್. ವಿಶ್ವನಾಥ ಶೆಟ್ಟಿ, ಡಾ.ಸುಂದರೇಶ್, ಬಿ.ಆರ್. ರಾಘವೇಂದ್ರ ಶೆಟ್ಟಿ, ಅಶ್ವಲ್, ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಉದಯಕುಮಾರ್, ಬೆಟ್ಟಮಕ್ಕಿ ರಾಘವೇಂದ್ರ ಶೆಟ್ಟಿ, ಸಯ್ಯದ್ ಯಾಸಿನ್ ಮುಂತಾದವರು ಉಪಸ್ಥಿತರಿದ್ದರು.