Categories
ತೀರ್ಥಹಳ್ಳಿ

ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರಿ ಮಳೆ ಹಾಗೂ ಶೀತ ಗಾಳಿ

ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರಿ ಮಳೆ ಹಾಗೂ ಶೀತ ಗಾಳಿ
– 26-6-2025 ಇಂದು ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ
– ರಜೆ ಘೋಷಿಸುವಂತೆ ತಹಸೀಲ್ದಾ‌ರ್ ರಂಜಿತ್ ಆದೇಶ

NAMMUR EXPRESS NEWS
ತೀರ್ಥಹಳ್ಳಿ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಸೀಲ್ದಾ‌ರ್ ರಂಜಿತ್ ಆದೇಶ ಹೊರಡಿಸಿದ್ದಾರೆ. ಕಳೆದ 24 ಗಂಟೆಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದ್ದು ಮಳೆಯ ಜೊತೆಗೆ ಶೀತ ಗಾಳಿ ಸಹ ಬೀಸುತ್ತಿದೆ. ಇದರಿಂದ ಮಕ್ಕಳಿಗೆ ಆರೋಗ್ಯದಲ್ಲಿ ತೊಂದರೆಯಾಗುವ ಮುನ್ಸೂಚನೆಯಿಂದ ಇಂದು ( 26-6-2025 ರ ಗುರುವಾರ) ರಜೆ ಘೋಷಿಸಲಾಗಿದೆ.
ಈಗ ನೀಡಿರುವ ರಜೆಯನ್ನು ಮುಂದಿನ ಶನಿವಾರದಂದು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.