ತೀರ್ಥಹಳ್ಳಿಯಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ?!
– ತುಂಗಾ ನದಿಯಲ್ಲಿ ನೀರು ಏರಿಕೆ: ಹಲವೆಡೆ ಅಪಾಯದ ಹಂತ
– ತೀರ್ಥಹಳ್ಳಿಯಲ್ಲಿ ಹಲವೆಡೆ ನೀರು ನುಗ್ಗಿ ಜಲಾವೃತ
NAMMUR EXPRESS NEWS
ತೀರ್ಥಹಳ್ಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ನೀರು ನುಗ್ಗಿದೆ. ತಾಲೂಕಿನ ಹಲವು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿಯಲ್ಲಿ ಹಲವೆಡೆ ನೀರು ನುಗ್ಗಿ ಜಲಾವೃತಗೊಂಡಿದೆ. ಬಾಳೇಬೈಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬಳಿ ನೀರು ತುಂಬಿದೆ. ತಾಲೂಕಿನ ವಿವಿಧ ಕಡೆ ಸುಮಾರು 300ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ತೀರ್ಥಹಳ್ಳಿ ತಾಲೂಕಿನಲ್ಲಿ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬುಧವಾರ ಮತ್ತು ಗುರುವಾರ ಮಳೆಯ ಜೊತೆ ಭಾರಿ ಪ್ರಮಾಣದ ಗಾಳಿ ಬೀಸುತ್ತಿದೆ, ಹೀಗೆ ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಸರಾಸರಿ ಇದ್ದು, ಗ್ರಾಮೀಣ ಪ್ರದೇಶಗಳಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ವಿದ್ಯುತ್, ಮೊಬೈಲ್ ಸಂಪರ್ಕ ಇಲ್ಲದಾಗಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಬಿಡದೆ ಗಾಳಿ ಮಳೆ ಸುರಿಯುತ್ತಿದ್ದು ನದಿ, ಹಳ್ಳಗಳ ನೀರು ಹೆಚ್ಚಿದೆ.
ತುಂಗಾ ನದಿ ಏರಿಕೆ!: ತೀರ್ಥಹಳ್ಳಿ ಸೇರಿ ತುಂಗಾ ನದಿಯ ನೀರು ದಿನೇ ದಿನೇ ಏರಿಕೆಯಾಗುತ್ತಿದೆ. ಪಟ್ಟಣದ ಬಾಳೇಬೈಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ನೀರು ನುಗ್ಗಿದ್ದು ಕೆಲವು ಭಾಗಗಳು ಸಂಪೂರ್ಣ ಜಲಾವೃತವಾಗಿದೆ.
ಇದನ್ನೂ ಓದಿ : ಛೇ.. ಎಂಥಾ ನೀಚ ಕೃತ್ಯ…ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ ಗ್ಯಾಂಗ್ ರೇಪ್!
HOW TO APPLY : NEET-UG COUNSELLING 2023