Categories
ತೀರ್ಥಹಳ್ಳಿ

ತೀರ್ಥಹಳ್ಳಿ ಪಟ್ಟಣದ ಸಮೀಪ ಹಿಟ್ ಅಂಡ್ ರನ್!

ತೀರ್ಥಹಳ್ಳಿ ಪಟ್ಟಣದ ಸಮೀಪ ಹಿಟ್ ಅಂಡ್ ರನ್!
– ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳೀಯ ಸಾವು
– ಶಿವಮೊಗ್ಗದಲ್ಲಿ ಚರಂಡಿಯಲ್ಲಿ ಪತ್ತೆಯಾಯ್ತು ಶವ
– ಸಕಲೇಶಪುರದಲ್ಲಿ ಬಾಲಕಿಯ ಜೀವ ತೆಗೆದ ಜೋಕಾಲಿ!

NAMMUR EXPRESS NEWS
ತೀರ್ಥಹಳ್ಳಿ: ( Thirthahalli ) ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಿಟ್​ ಆ್ಯಂಡ್​ ರನ್​ ಅಪಘಾತಕ್ಕೆ ಯುವಕ ಬಲಿಯಾದ ಘಟನೆ ಭಾನುವಾರ ತಡ ರಾತ್ರಿ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಶಿವರಾಜಪುರದ ಬಳಿಯಲ್ಲಿ, ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವರಾಜಪುರದ ನಿವಾಸಿ ಮಹೇಶ್ ಮೃತ ದುರ್ಧೈವಿ.
ರಂಜದ ಕಟ್ಟೆ ಸಮೀಪ ಬರುವ ಶಿವರಾಜಪುರ ಬಸ್ ಸ್ಟಾಪ್ ಬಳಿಯಲ್ಲಿ ನಿನ್ನೆ ರಾತ್ರಿ 11 ಗಂಟೆ ನಂತರ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾವುದೋ ಅಪರಿಚಿತ ವಾಹನವೊಂದು ನಡೆದುಕೊಂಡು ಹೋಗುತ್ತಿದ್ದ ಮಹೇಶ್​ರವರಿಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದಿದ್ದ ವಾಹನ ಡಿಕ್ಕಿ ಹೊಡೆದು ಅಲ್ಲಿಂದ ಮುಂದಕ್ಕೆ ಸಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹೇಶ್​ ಅಲ್ಲಿಯೇ ರಸ್ತೆ ಬದಿಯಲ್ಲಿ ಬಿದ್ದಿದ್ದರು. ಕೆಲವು ಹೊತ್ತಿನ ಬಳಿಕ ದಾರಿಯಲ್ಲಿ ಹೋಗುತ್ತಿದ್ದವರು ಮಹೇಶ್​ರವರನ್ನ ಗುರುತಿಸಿ ತೀರ್ಥಹಳ್ಳಿ ಆಸ್ಪತ್ರೆಗೆ ಅವರನ್ನ ರವಾನಿಸಿದ್ದಾರೆ. ಅಷ್ಟರಲ್ಲಾಗಲೇ ಮಹೇಶ್ ಸಾವನ್ನಪ್ಪಿದ್ದರು. ಸದ್ಯ ಅವರ ಮೃತದೇಹವನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇನ್ನೂ ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಪರಿಶೀಲನೆ ನಡೆಸ್ತಿದ್ದಾರೆ.

ಸಾಕ್ಷಿಗೂ ಸಿಗದ ಸಿಸಿ ಕ್ಯಾಮರಾ?

ಘಟನೆಯಲ್ಲಿ ಮಹೇಶ್​ರವರಿಗೆ ಡಿಕ್ಕಿ ಹೊಡೆದ ವಾಹನ ಯಾವುದು ಎಂಬ ಸುಳಿವು ಕೂಡ ಲಭ್ಯವಾಗಿಲ್ಲ. ಆಯಕಟ್ಟಿನಲ್ಲಿ ಸಿಸಿ ಕ್ಯಾಮರಾಗಳು ಇದ್ದಿದ್ದರೇ ಆರೋಪಿಯನ್ನು ಹುಡುಕುವ ಪ್ರಯತ್ನ ಮಾಡಬಹುದಿತ್ತು. ಸಮರ್ಪಕವಾಗಿ ಸಿಸಿ ಕ್ಯಾಮರಾಗಳನ್ನು ಸ್ಥಳೀಯ ಆಡಳಿತ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಖಾಸಗಿ ಸಂಸ್ಥೆಗಳು ನೀಡಿದ ಸಿಸಿ ಕ್ಯಾಮರಾಗಳನ್ನು ಕೂಡ ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ.

ಚರಂಡಿಯಲ್ಲಿ ಸಿಕ್ತು ಮೃತದೇಹ

ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಶಿವಮೊಗ್ಗ ವಿದ್ಯಾನಗರದ 5 ನೇ ತಿರುವಿನಲ್ಲಿ ಬರುವ ಸುಭಾಷ್ ನಗರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಜ್ಞಾನೇಶ್ವರ್ ಎಂಬ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ಧಾನೆ.
ಜ್ಞಾನೇಶ್ವರ್ ಬ್ಯಾಗ್​ ರಿಪೇರಿ ಕೆಲಸ ಮಾಡುತ್ತಿದ್ದು, ಭಾನುವಾರ ತನ್ನ ಅತ್ತೆ ಮನೆಗೆ ತೆರಳಿದ್ದಾನೆ. ಆ ಮನೆ ತನಗೆ ಸೇರಬೇಕು ಎಂದು ಆತನ ಹೆಂಡತಿಯ ತಾಯಿ ತಮ್ಮನ ಜೊತೆಗೆ ಮಾತುಕತೆ ಆರಂಭಿಸಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಕಿತ್ತಾಟ ನಡೆದು ತಳ್ಳಾಟ ಆಗಿದೆ. ಈ ವೇಳೆ ಜ್ಞಾನೇಶ್ವರ್​ ಮನೆ ಎದುರಿಗಿದ್ದ ಚರಂಡಿಗೆ ಬಿದ್ದಿದ್ದಾನೆ. ಅಲ್ಲಿಯೇ ಸಾವನ್ನಪ್ಪಿದ್ಧಾನೆ. ಕುಡಿದ ಅಮಲಿನಲ್ಲಿ ನಡೆದ ಘಟನೆಯಲ್ಲಿ ಜ್ಞಾನೇಶ್ವರ್​ ಸಾವನ್ನಪ್ಪಿದ್ದಾನೆ. ಬೆಳಗ್ಗೆ ಸ್ಥಳೀಯರು ಚರಂಡಿಯಲ್ಲಿ ಮೃತದೇಹ ಇರುವದು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆ ಪೊಲೀಸ್ ಸ್ಟೇಷನ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.

ಬಾಲಕಿಯ ಜೀವ ತೆಗೆದ ಜೋಕಾಲಿ!

ಮನೆಯ ಮುಂದೆ ಬಟ್ಟೆ ಒಣಗಿಸಲು ಕಟ್ಟಿದ್ದ ಹಗ್ಗಕ್ಕೆ ಸೀರೆ ಕಟ್ಟಿ ಜೋಕಾಲಿ ಆಡುತ್ತಿದ್ದ ಬಾಲಕಿಗೆ ಸೀರೆ ಸುತ್ತಿ ಕೊಂಡು ಆಕೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವನಗೂರು ಗ್ರಾಮದಲ್ಲಿ ಸಂಭವಿಸಿದೆ.ಬಸವರಾಜು-ಬೇಬಿದಂಪತಿಯ ಪುತ್ರಿ, 4ನೇ ತರಗತಿ ವಿದ್ಯಾರ್ಥಿನಿ ಸಾನಿತಾ (9) ಮೃತಪಟ್ಟ ಬಾಲಕಿ. ಅಜ್ಜಿ ಸೀರೆಯನ್ನು ಬಿಡಿಸಲು ಪ್ರಯತ್ನಿಸಿ ದರೂ ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ತೀರ್ಥಹಳ್ಳಿ ಪ್ರತೀಕ್ ಗೌಡ ಕೇಸ್!

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.