Categories
ತೀರ್ಥಹಳ್ಳಿ

ಪಕ್ಷ ಸಂಘಟಕ ಅಮ್ರಪಾಲಿ ಸುರೇಶ್ ಅವರಿಗೆ ಮಹತ್ವದ ಹುದ್ದೆ!

ಪಕ್ಷ ಸಂಘಟಕ ಅಮ್ರಪಾಲಿ ಸುರೇಶ್ ಅವರಿಗೆ ಮಹತ್ವದ ಹುದ್ದೆ!
– ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ
– ಅಭಿಮಾನಿಗಳು, ಪಕ್ಷದ ವಲಯದಲ್ಲಿ ಶುಭಾಶಯ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಕಾಂಗ್ರೆಸ್ ಸಂಘಟಕ ಅಮ್ರಪಾಲಿ ಸುರೇಶ್‌ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಜಿಲ್ಲಾಧ್ಯಕ್ಷರಾದ ಸುಂದರೇಶ್ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ಕೊಟ್ಟು ಪಕ್ಷದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರತವಾಗಿ ಕಾಂಗ್ರೆಸ್‌ ಪಕ್ಷವು ಮತ್ತಷ್ಟು ಸದೃಡವಾಗಿ ಮುನ್ನಡೆಸಲು ಸಹಕರಿಸಬೇಕಾಗಿ ಆದೇಶ ಪತ್ರದಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ಪಕ್ಷದ ಸೂಚನೆ ಮತ್ತು ಆದೇಶಗಳ ಅನುಸಾರವಾಗಿ ಪಕ್ಷ ನೀಡುವ ಜವಾಬ್ದಾರಿ ಮತ್ತು ಪಕ್ಷದ ನೀತಿ, ನಿರೋಪನೆಗಳು ಉಲ್ಲಂಘನೆಯಾಗದಂತೆ ಕರ್ತವ್ಯ ನಿರ್ವಹಿಸಲು ಪಕ್ಷದ
ಸಂಘಟನೆಗೆ ಇಂದಿನಿಂದಲೇ ತೊಡಗಿಸಿಕೊಂಡು ಕಾರ್ಯೋನ್ಮುಖರಾಗಬೇಕೆಂದು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ.

ಕಾಂಗ್ರೆಸ್ ಪ್ರಬಲ ಸಂಘಟಕನಿಗೆ ಒಲಿದ ಹುದ್ದೆ!

ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಅಮ್ರಪಾಲಿ ಸುರೇಶ ಅವರು ಹಳ್ಳಿ ಹಳ್ಳಿಯಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ. ಯುವ ಸಮುದಾಯವನ್ನು ಪಕ್ಷಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಭಿನಂದನೆಗಳ ಮಹಾಪೂರ

ಅಮ್ರಪಾಲಿ ಸುರೇಶ್ ಅವರ ಆಯ್ಕೆಗೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ತಮ್ಮ ನೆಚ್ಚಿನ ನಾಯಕನಿಗೆ ಹುದ್ದೆ ಸಿಕ್ಕಿರುವುದು ಅವರ ಅಭಿಮಾನಿಗಳು, ಆಪ್ತರಿಗೆ ಸಂತಸ ತಂದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.