ಕಾಂಗ್ರೆಸ್ಸಲ್ಲಿ ಕೆಲ ಪ್ರಾಮಾಣಿಕ ಯುವ ಕಾರ್ಯಕರ್ತರಿಗೆ ಅನ್ಯಾಯ?
– ತೀರ್ಥಹಳ್ಳಿ ಪಟ್ಟಣದಲ್ಲಿ ಸಕ್ರಿಯರಾಗಿರುವ ಯುವ ಮುಖಂಡರು
– ಯುವ ಮುಖಂಡ ಶ್ರೀಕಾಂತ್ ಅವರಿಗೆ ಸಿಗದ ಸ್ಥಾನಮಾನ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದಲ್ಲಿ ಕೆಲವು ಯುವ ಕಾರ್ಯಕರ್ತರಿಗೆ ಅನ್ಯಾಯ ಆಗಿದೆ. ಈಗಾಗಲೇ ಅನೇಕ ಸಮಿತಿಗಳನ್ನು ರಚನೆ ಮಾಡಿದ್ದು, ಕೆಲವರಿಗೆ ಯಾವುದೇ ರೀತಿಯ ಹುದ್ದೆಗಳು ಸಿಕ್ಕಿಲ್ಲ ಇದರಿಂದ ಅನೇಕ ಪ್ರಾಮಾಣಿಕ ಕಾರ್ಯಕರ್ತರಿಗೆ ಬೇಸರಗೊಂಡಿದ್ದಾರೆ ಎನ್ನಲಾಗಿದೆ.
ಇದೀಗ ತೀರ್ಥಹಳ್ಳಿಯ ಯುವ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ತೀರ್ಥಹಳ್ಳಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀಕಾಂತ್ ಬೆಟ್ಟಮಕ್ಕಿ ಅವರಿಗೆ ಯಾವುದೇ ರೀತಿಯ ಸ್ಥಾನಮಾನ ಸಿಗದೇ ಇರುವುದು ಅವರ ಸ್ನೇಹಿತ ವಲಯದಲ್ಲಿ ಬೇಸರಕ್ಕೆ ಕಾರಣವಾಗಿದೆ.
ತೀರ್ಥಹಳ್ಳಿ ಪಟ್ಟಣದಲ್ಲಿ ನಡೆಯುವ ಪಕ್ಷದ ಯಾವುದೇ ಸಭೆ ಪ್ರತಿಭಟನೆ ಕಾರ್ಯಕ್ರಮದಲ್ಲಿ ಶ್ರೀಕಾಂತ ಮುಂಚೂಣಿಯಲ್ಲಿರುತ್ತಾರೆ. ಕಳೆದ ಒಂದು ದಶಕದಿಂದ ಪಕ್ಷದ ಪರವಾಗಿ ಬ್ಯಾನರ್ ಹಿಡಿಯುವ ಪ್ರಮುಖರಾಗಿದ್ದಾರೆ. ಆದರೆ ಅವರಿಗೆ ಪಕ್ಷದಲ್ಲಿ ಯಾವುದೇ ರೀತಿಯ ಹೊಣೆ ನೀಡದೆ ಇರುವುದು ಈಗ ಬೇಸರಕ್ಕೆ ಅವರ ಆಪ್ತ ವಲಯದ ಕಾರಣವಾಗಿದೆ. ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದವರಿಗೆ ಯಾವುದೇ ಅವಕಾಶ ಸಿಗುವುದೇ ಇಲ್ಲ ಎಂಬ ಆರೋಪ ಕೇಳಿ ಬಂದಿದೆ.
ಶ್ರೀಕಾಂತ್ ಅವರು ತೀರ್ಥಹಳ್ಳಿ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಈ ಹಿಂದಿನ ಅವಧಿಯಲ್ಲಿ ಸೇವೆ ಸಲ್ಲಿಸಿದ್ದರು. ಜೊತೆಗೆ ವಿವಿಧ ಸಂಘಟನೆ ಹಾಗೂ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಪಕ್ಷದ ಇತ್ತೀಚಿನ ಚುನಾವಣೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಆದರೂ ಅವರಿಗೆ ಪಕ್ಷ ಯಾವುದೇ ಸಮಿತಿ ಅಥವಾ ಯಾವುದೇ ಜವಾಬ್ದಾರಿ ನೀಡಿಲ್ಲ. ಈ ಬಗ್ಗೆ ಪಕ್ಷ ಗಮನ ವಹಿಸಬೇಕಾಗಿದೆ ಎಂಬ ಒತ್ತಾಯ ಹೆಚ್ಚಾಗಿದೆ.