Categories
ತೀರ್ಥಹಳ್ಳಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಹೋರಾಟ!

ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಹೋರಾಟ!
– ತೀರ್ಥಹಳ್ಳಿಯಲ್ಲಿ ಕುಣಜೆ ಕಿರಣ್ ಪ್ರಭಾಕರ್ ನೇತೃತ್ವದಲ್ಲಿ ಪ್ರತಿಭಟನೆ
– ಕಾಂಗ್ರೇಸ್ ಪಕ್ಷದ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವ

NAMMUR EXPRESS NEWS
ತೀರ್ಥಹಳ್ಳಿ: ರೈತರು ಹಾಗೂ ಸಾಮಾನ್ಯ ಜನರ ಬಗ್ಗೆ ಕಾಂಗ್ರೆಸ್ ಸರ್ಕಾರ ಅಸಡ್ಡೆ ತೋರುತ್ತಿದೆ. 2 ವರ್ಷದ ಆಡಳಿತದಲ್ಲಿ ಕಾಂಗ್ರೇಸ್ ಪಕ್ಷದ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ ಮಾಡಿದೆ.
ಜಾತ್ಯತೀತ ಜನತಾದಳ ತೀರ್ಥಹಳ್ಳಿ ತಾಲೂಕು ಆಶ್ರಯದಲ್ಲಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ಸಭೆಯಲ್ಲಿ
ತೀರ್ಥಹಳ್ಳಿ ತಾಲೂಕು ಅಧ್ಯಕ್ಷರಾದ ಕುಣಜೆ ಕಿರಣ್ ಪ್ರಭಾಕರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತ ಅರಣ್ಯ ಕಾಯ್ದೆಗಳ ಬಗ್ಗೆ ರೈತರಿಗೆ ಮಲೆನಾಡು ಭಾಗದಲ್ಲಿ ಅತಿಯಾದ ಮಳೆಯಿಂದ ತೊಂದರೆಗಳು ಒಳಗಾದರೂ ಸರ್ಕಾರ ಆಗಲಿ, ಉಸ್ತುವಾರಿ ಸಚಿವರಾಗಲಿ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. ಹಿರಿಯ ಮುಖಂಡರು, ಯುವ ಕಾರ್ಯಕರ್ತರುಗಳು ಭಾಗವಹಿಸಿದ್ದರು.
ಭಾರತ ರಾಷ್ಟ್ರೀಯ ಕಾಂಗ್ರೇಸ್ ಪಕ್ಷವು ಕರ್ನಾಟಕದಲ್ಲಿ ಕಳೆದ 2 ವರ್ಷಗಳಿಂದ ಆಡಳಿತವನ್ನು ನಡೆಸುತ್ತಿದ್ದು, ತನ್ನ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು, ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಆಡಳಿತ ನಡೆಸುತ್ತಿರುವ ಸರ್ಕಾರದ ಸಚಿವರುಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇದಕ್ಕೆ ವಾಲ್ಮೀಕಿ ನಿಗಮ ಹಾಗೂ ವಸತಿ ಇಲಾಖೆಯಲ್ಲಿ ನಡೆದಿರುವ ಹಗರಣಗಳೇ ಸಾಕ್ಷಿಯಾಗಿರುತ್ತದೆ. ಭ್ರಷ್ಟಾಚಾರ ತೊಲಗಿಸಿ ಆಡಳಿತ ನಡೆಸುತ್ತೇವೆಂದು ಕರ್ನಾಟಕ ಜನ ತಡೆಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ಸರ್ಕಾರವು ಕಳೆದ 2 ವರ್ಷಗಳಿಂದ ತನ್ನ ಆಡಳಿತ ವ್ಯವಸ್ಥೆಯಲ್ಲಿ ದೀನದಲಿತರಿಗೆ ಶೋಷಿತ ವರ್ಗದವರಿಗೆ, ಬಡವರಿಗೆ, ರೈತರಿಗೆ ನೀಡಿದ ಭರವಸೆಗಳನ್ನೆಲ್ಲ ಗಾಳಿಗೆ ತೂರಿದ್ದು, ಸರ್ಕಾರದಲ್ಲಿ ತಳಮಟ್ಟದಿಂದ ಮೇಲ್ಮಟ್ಟದವರೆಗೂ ಭ್ರಷ್ಟಾಚಾರವು ತಾಂಡವ ಆಡುತ್ತಿದ್ದು, ಕರ್ನಾಟಕ ಜನತೆ ಬ್ರಮನಿರಸನಗೊಂಡಿರುತ್ತಾರೆ.
ಕರ್ನಾಟಕದಲ್ಲಿ ಅತಿವೃಷ್ಟಿ ಹಾಗೂ ಆರೋಗ್ಯ ಸಮಸ್ಯೆ ಉಂಟಾದರೂ ಸಹ ಸರ್ಕಾರದ ಸಚಿವರು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷವಹಿಸಿದ್ದು, ರಾಜ್ಯದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ದಿನನಿತ್ಯ ನಡೆಯುತ್ತಿದ್ದು, ಸರ್ಕಾರದ ಇರುವಿಕೆಯ ಬಗ್ಗೆ ಸಂಶಯ ಉಂಟಾಗಿರುತ್ತದೆ. ಹಾಗೂ ಸರ್ಕಾದಲ್ಲಿ ಆಂತರಿಕವಾಗಿ ಕಚ್ಚಾಟಗಳು ಮಿತಿಮೀರಿದ್ದು, ಜನ ಸಾಮಾನ್ಯರ ಸಮಸ್ಯೆ ಬಗೆಹರಿಸುವಲ್ಲಿ ಈ ಸರ್ಕಾರವು ಸಂಪೂರ್ಣವಾಗಿ ವಿಫಲಾಗಿರುತ್ತದೆ. ಆದ್ದರಿಂದ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೇಸ್ ಪಕ್ಷದ ಸರ್ಕಾರವನ್ನು ವಜಾಗೊಳಿಸಿ, ರಾಜ್ಯಪಾಲರ ಆಡಳಿತವನ್ನು ಜಾರಿಗೊಳಿಸಿಕೊಡಬೇಕಾಗಿ ತೀರ್ಥಹಳ್ಳಿ ಜಾತ್ಯಾತೀತ ಜನತಾ ದಳವು ಅಗ್ರಹಪೂರ್ವಕವಾಗಿ ವಿನಂತಿಸಿಕೊಳ್ಳುತ್ತದೆ.
ಜೆಡಿಎಸ್ ಪ್ರಮುಖರಾದ ಗುರುದತ್ತ ಕುಡುವತ್ತಿ, ಯುವ ಜನತಾದಳ ಅಧ್ಯಕ್ಷರಾದ ರಾಘವೇಂದ್ರ ತಲಬಿ, ಸುರೇಂದ್ರ, ವೆಂಕಟೇಶ್, ಸಸಿತೋಟ ಡಾಕಪ್ಪ ಗೌಡ, ಪಟೇಲ್ ವೆಂಕಟೇಶ್, ಎಲ್ ಡಿ ಶೈಲಜಾ ಇವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.