ಕಿಮ್ಮನೆ ರತ್ನಾಕರ್ ಧರ್ಮಪತ್ನಿಯವರಿಗೆ ಬೆಂಗಳೂರಿನಲ್ಲಿ ಶಸ್ತ್ರ ಚಿಕಿತ್ಸೆ
– ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದು ಅತಿ ಶೀಘ್ರ ಗುಣಮುಖರಾಗಲೆಂದು ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
NAMMUR EXPRESS NEWS
ತೀರ್ಥಹಳ್ಳಿ: ಕಿಮ್ಮನೆ ರತ್ನಾಕರ್ ಅವರ ಧರ್ಮಪತ್ನಿ ಅವರಿಗೆ ಬೆಂಗಳೂರಿನಲ್ಲಿ ಶಸ್ತ್ರ ಚಿಕಿತ್ಸೆ ನಡೆಯತ್ತಿದ್ದು ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದು ಅತಿ ಶೀಘ್ರ ಗುಣಮುಖರಾಗಲೆಂದು ಯುವ ಕಾಂಗ್ರೆಸ್ ಮುಖಂಡರು ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಯುವ ಕಾಂಗ್ರೆಸ್ ಅಧ್ಯಕ್ಷರು ಮತ್ತು ಸದಸ್ಯರುಗಳು , ಪಟ್ಟಣ ಪಂಚಾಯತ್ ಸದಸ್ಯರುಗಳು, ಪಕ್ಷದ ಹಿರಿಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.