ಕೋಣಂದೂರಿಗೆ ಕುಮಾರಣ್ಣನ ಎಂಟ್ರಿ!
– ಏ.29ರಂದು ರಾಘವೇಂದ್ರ ಪರ ಪ್ರಚಾರ
– ಮೈತ್ರಿ ಹಿನ್ನಲೆಯಲ್ಲಿ ಬಿಜೆಪಿ ಪರ ಮತ ಕೇಳಲು ಆಗಮನ
NAMMUR EXPRESS NEWS
ತೀರ್ಥಹಳ್ಳಿ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಚುನಾವಣಾ ಪ್ರಚಾರ ನಡೆಸಲು ಮೈತ್ರಿ ಕೂಟದ ಪ್ರಮುಖ ನಾಯಕರು, ಮಾಜಿ ಮುಖ್ಯಮಂತ್ರಿಗಳೂ ಆದ ಹೆಚ್.ಡಿ.ಕುಮಾರಸ್ವಾಮಿ ಏಪ್ರಿಲ್ 29ರ ಸೋಮವಾರ ಬೆಳಿಗ್ಗೆ 10-30ಕ್ಕೆ ಕೋಣಂದೂರಿಗೆ ಆಗಮಿಸಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪರ ಪ್ರಚಾರಕ್ಕೆ ಬಂದಿದ್ದ ಕುಮಾರಸ್ವಾಮಿ ಈಗ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಾಗಿರುವ ಹಿನ್ನಲೆಯಲ್ಲಿ ಬಿಜೆಪಿ ಪರ ಮತ ಕೇಳಲು ಆಗಮಿಸುತ್ತಿದ್ದಾರೆ.