ಲಾರಿ ಮಾಲೀಕರು, ಚಾಲಕರ ಹೋರಾಟ!
– ಕೇಂದ್ರ ಸರ್ಕಾರದ ಹಿಟ್ ಅಂಡ್ ರನ್ ಪ್ರಕರಣದ ಶಿಕ್ಷೆಗೆ ವಿರೋಧ
– ತೀರ್ಥಹಳ್ಳಿ ತಾಲ್ಲೂಕು ಲಾರಿ ಮಾಲೀಕರ ಮತ್ತು ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ
NAMMUR EXPRESS NEWS
ತೀರ್ಥಹಳ್ಳಿ: ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ಹಿಟ್ ಅಂಡ್ ರನ್ ಪ್ರಕರಣದ ಶಿಕ್ಷೆ ಮತ್ತು ದಂಡ ರದ್ದುಗೊಳಿಸಲು ಒತ್ತಾಯಿಸಿ ತೀರ್ಥಹಳ್ಳಿಯಲ್ಲಿ ತಾಲೂಕು ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ತೀರ್ಥಹಳ್ಳಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ, ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ವಾಹನ ಚಾಲನೆ ಸಂದರ್ಭದಲ್ಲಿ ನಡೆಯುವ ಅಪಘಾತ ಪ್ರಕರಣದಲ್ಲಿ ಹಿಟ್ ಅಂಡ್ ರನ್ ಮಾಡಿದ ಚಾಲಕರಿಗೆ 10 ವರ್ಷ ಜೈಲು ಮತ್ತು 7 ಲಕ್ಷ ರೂಪಾಯಿಗಳ ದಂಡ ವಿಧಿಸುವ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಮುಂದಾಗಿರುತ್ತದೆ. ಅಪಘಾತ ಪ್ರಕರಣವು ಉದ್ದೇಶ ಪೂರ್ವಕವಾಗಿ ಮಾಡುವ ಪ್ರಕರಣವಾಗಿರುವುದಿಲ್ಲ.
ಈ ಸಂದರ್ಭದಲ್ಲಿ ಹಿಟ್ ಆಂಡ ರನ್ ಆದ ಸಂದರ್ಭದಲ್ಲಿ ಆ ವಾಹನದ ಚಾಲಕರಿಗೆ 10 ವರ್ಷ ಜೈಲು ಮತ್ತು 7 ಲಕ್ಷ ರೂಪಾಯಿಗಳ ದಂಡ ವಿಧಿಸುವ ಬಗ್ಗೆ ಕೇಂದ್ರ ಸರ್ಕಾರವು ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿರುತ್ತದೆ. ಈ ಕಾಯ್ದೆಯನ್ನು ಜಾರಿಗೊಳಿಸಿದರೆ ಬಡ ಚಾಲಕರು ಶಿಕ್ಷೆಗೊಳಗಾಗುವ ಸಂಭವವಿದ್ದು ಇದರಿಂದ ಚಾಲಕರಿಗೆ ತೊಂದರೆಯಾಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತಕ್ಷಣ ಈ ಕಾಯ್ದೆಯನ್ನು ಜಾರಿಗೊಳಿಸದಂತೆ ದೇಶದಾದ್ಯಂತ ವಾಹನ ಮಾಲೀಕರು ಮತ್ತು ಚಾಲಕರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲ್ಲೂಕು ಲಾರಿ ಮಾಲೀಕರ ಮತ್ತು ಚಾಲಕರ ಕ್ಷೇಮಾಭಿವೃದ್ಧಿ ಸಂಘ ತೀರ್ಥಹಳ್ಳಿ ಪಟ್ಟಣದಲ್ಲಿ ಪ್ರತಿಭಟನಾ ಸಭೆಯನ್ನು ನಡೆಸಿ ಹಿಟ್ ಅಂಡ್ ರನ್ ಪ್ರಕರಣವನ್ನು ಜಾರಿಗೊಳಿಸದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಮಾನ್ಯ ತಹಶೀಲ್ದಾರ್ರವರು ತೀರ್ಥಹಳ್ಳಿ ತಾಲ್ಲೂಕು ಇವರ ಮುಖಾಂತರ ಈ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಸಂಘದ ಅಧ್ಯಕ್ಷರಾದ ರಂಜಿತ್ ಶೆಟ್ಟಿ ಸೇರಿ ನೂರಾರು ಮಾಲೀಕರು, ಚಾಲಕರು ಹಾಜರಿದ್ದರು.
