ತೀರ್ಥಹಳ್ಳಿಯಲ್ಲಿ ಚುನಾವಣೆಯ ಪ್ರಣಾಳಿಕೆಯನ್ನು ಉದ್ಘಾಟನೆ ಮಾಡಿದ ಮಧು ಬಂಗಾರಪ್ಪ.!
– ನನ್ನ ಬೂತ್ ನನ್ನ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಿಮ್ಮನೆ
– ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸುತ್ತ ಮತಯಾಚನೆ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಶನಿವಾರ ಕಾಂಗ್ರೆಸ್ ಕಚೇರಿಯ ಗಾಂಧಿ ಭವನದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆಯ ಗ್ಯಾರಂಟಿಯನ್ನು, ಚುನಾವಣೆಯ ಪ್ರಣಾಳಿಕೆಯ ಉದ್ಘಾಟನೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಅವರು ಇವತ್ತಿನ ಈ ಗ್ಯಾರಂಟಿ ತುಂಬಾ ಚೆನ್ನಾಗಿದೆ, ಜನರ ವಿಶ್ವಾಸ ಗಳಿಸಿದೆ. ಗೀತಾ ಶಿವರಾಜ್ ಕುಮಾರ್ ಅವರು ತೀರ್ಥಹಳ್ಳಿಗೆ ಬಂದಾಗ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ಸಂತೋಷದ ವಿಷಯ, ಈ ರೀತಿಯ ವಿಶ್ವಾಸ ಮತದಾರರು ಕೊಡುತ್ತಿದ್ದಾರೆ ಎಂದರು. ಗೃಹಲಕ್ಷ್ಮಿ, ಗೃಹಜೋತಿ,ಅನ್ನ ಭಾಗ್ಯದಿಂದ ಜನರಿಗೆ ಅನುಕೂಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ್, ಮಂಜುನಾಥ್ ಗೌಡ, ಆಯನೂರು ಮಂಜುನಾಥ್, ಕಲಗೋಡು ರತ್ನಾಕರ್, ಕಡ್ತುರ್ ದಿನೇಶ್ ಸೇರಿದಂತೆ ಪಕ್ಷದ ಎಲ್ಲ ಮುಖಂಡರು ಹಾಜರಿದ್ದರು. ಸೋಮವಾರ ಕಿಮ್ಮನೆ ರತ್ನಾಕರ್ ಹಾಗೂ ಪಕ್ಷದ ಕಾರ್ಯಕರ್ತರು ಪಕ್ಷದ ಗ್ಯಾರಂಟಿ ಕಾರ್ಡನ್ನು ವಿತರಿಸುತ್ತ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ರವರು ನನ್ನ ಬೂತ್ ನನ್ನ ಜವಾಬ್ದಾರಿ ಕಾರ್ಯಕ್ರಮವನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಪರವಾಗಿ ಮತಯಾಚನೆ ಮಾಡಲು ನಾನು ಆರಂಭ ಮಾಡಿದ್ದೇನೆ, ಈ ಕ್ಷೇತ್ರದ ಎಲ್ಲಾ ಮತದಾರರು ನಮ್ಮ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡುವುದರ ಮೂಲಕ ಗೆಲ್ಲಿಸಬೇಕು ಎಂದು ವಿನಂತಿ ಮಾಡಿಕೊಂಡರು.