Categories
ತೀರ್ಥಹಳ್ಳಿ

ತೀರ್ಥಹಳ್ಳಿಗೆ ಮಧು ಬಂಗಾರಪ್ಪ: ಪಕ್ಷದ ಕಾರ್ಯಕರ್ತರ ಸಭೆ

ತೀರ್ಥಹಳ್ಳಿಗೆ ಮಧು ಬಂಗಾರಪ್ಪ: ಪಕ್ಷದ ಕಾರ್ಯಕರ್ತರ ಸಭೆ
– ಮಾ.23ರಂದು ಮಧ್ಯಾಹ್ನ 3-00 ಗಂಟೆಗೆ ಕುಶಾವತಿಯಲ್ಲಿರುವ ಕೆ.ಟಿ.ಕೆ. ಕಲ್ಯಾಣ ಮಂದಿರದಲ್ಲಿ ಸಭೆ
– ಪಕ್ಷದ ಮುಖಂಡರುಗಳು, ಚುನಾಯಿತ ಪ್ರತಿನಿಧಿಗಳು, ಅಧ್ಯಕ್ಷರು ಮತ್ತು ಸದಸ್ಯಗಳು ಎಲ್ಲರೂ ಕೂಡ ಭಾಗವಹಿಸುವಂತೆ ಮನವಿ

NAMMUR EXPRESS NEWS
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ, ದಿನಾಂಕ 23-03-2025 ನೇ ಭಾನುವಾರ ಮಧ್ಯಾಹ್ನ 3-00 ಗಂಟೆಗೆ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ ನೇತೃತ್ವದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಭೆಯನ್ನು ತೀರ್ಥಹಳ್ಳಿಯ ಕುಶಾವತಿಯಲ್ಲಿರುವ ಕೆ.ಟಿ.ಕೆ. ಕಲ್ಯಾಣ ಮಂದಿರದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾದ ಶ್ರೀ ಪ್ರಸನ್ನಕುಮಾರ್, ಮಾಜಿ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರ್, ಡಿ.ಸಿ.ಸಿ. ಬ್ಯಾಂಕ್ ಹಾಗೂ ಎಂ.ಎ.ಡಿ.ಬಿ. ಅಧ್ಯಕ್ಷರಾದ ಶ್ರೀ ಆರ್.ಎಂ. ಮಂಜುನಾಥಗೌಡರವರು ಭಾಗವಹಿಸಲಿದ್ದಾರೆ. ಪಕ್ಷದ ತಾಲ್ಲೂಕು ಮತ್ತು ಜಿಲ್ಲಾ ಮುಖಂಡರುಗಳು, ಚುನಾಯಿತ ಪ್ರತಿನಿಧಿಗಳು, ಮಾಜಿ ಚುನಾಯಿತ ಪ್ರತಿನಿಧಿಗಳು, ಸರ್ಕಾರದಿಂದ ನಾಮಕರಣಗೊಂಡ ಸದಸ್ಯರುಗಳು, ಪಂಚಾಯಿತಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರುಗಳು, ಬೂತ್ ಅಧ್ಯಕ್ಷರು ಮತ್ತು ಸದಸ್ಯರುಗಳು, ಬ್ಲಾಕ್‌ನ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪಕ್ಷದ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್, ಬ್ಲಾಕ್ ಅಧ್ಯಕ್ಷರಾದ ಮುಡುಬ ರಾಘವೇಂದ್ರ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.