ಮಲ್ನಾಡ್ ಕ್ಲಬ್ ಅಧ್ಯಕ್ಷ ಸುಂದರೇಶ್ ವಿಧಿವಶ
– ಹತ್ತು ಹಲವು ಸಂಘಟನೆಗಳಲ್ಲಿ ಸೇವೆ
– ಹೃದಯಾಘಾತದಿಂದ ವಿಧಿ ವಶ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಮಲ್ನಾಡ್ ಕ್ಲಬ್ ಅಧ್ಯಕ್ಷರಾಗಿ ತೀರ್ಥಹಳ್ಳಿಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಂದರೇಶ್ ( 65 ವರ್ಷ ) ಅವರು ಮಂಗಳವಾರ ಹೃದಯಾಘಾತದಿಂದ ವಿಧಿ ವಶರಾಗಿದ್ದಾರೆ. ತೀರ್ಥಹಳ್ಳಿಯ ಮೇಳಿಗೆ ಆಸ್ಪತ್ರೆಯಲ್ಲಿ ಇಹ ಲೋಕ ತ್ಯಜಿಸಿದ್ದಾರೆ.ಸಹ್ಯಾದ್ರಿ ಡಿಪ್ಲೋಮೋ ಕಾಲೇಜಲ್ಲಿ ಪ್ರಿನ್ಸಿಪಾಲರಾಗಿದ್ದ ಸುಂದರೇಶ್ ಅವರು ಉತ್ತಮ ವಾಸ್ತು ತಜ್ಞರಾಗಿಯೂ ಕೆಲಸ ಮಾಡುತ್ತಿದ್ದರು. ಮಲೆನಾಡಿಗೆ ಇವರ ಕೊಡುಗೆ ಅಪಾರವಾಗಿತ್ತು. ತುಂಗಾ ಕಾಲೇಜು ಆಡಳಿತ ಮಂಡಳಿಯಲ್ಲಿ ಖಜಾಂಚಿಯಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕ್ಲಬ್‌ನ ಆಡಳಿತ ಮಂಡಳಿ ಕೋರಿದೆ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ. ಇವರ ಪಾರ್ಥಿವ ಶರೀರವನ್ನು ಅವರ ತುಡ್ಕಿ ಸ್ವಗೃಹದಲ್ಲಿ ಇರಿಸಲಾಗಿದ್ದು ಮುಂದಿನ ನಿರ್ಧಾರವನ್ನು ತಿಳಿಸಲಾಗುವುದು.
