ತೀರ್ಥಹಳ್ಳಿ: ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಆರ್. ಎಂ. ಮಂಜುನಾಥ್ ಗೌಡ ಅವರ ಅನುದಾನದಲ್ಲಿ ಈಗಾಗಲೇ ತೀರ್ಥಹಳ್ಳಿ ಸೇರಿ ಮಲೆನಾಡ ಅನೇಕ ಕಡೆ ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಗೊಳ್ಳುತ್ತಿವೆ. ಇದೀಗ ಸ್ವಾತಂತ್ರ ಹಬ್ಬದ ದಿನ ನಿರ್ಮಾಣಗೊಂಡಿರುವ ನೂತನ ಬಸ್ ನಿಲ್ದಾಣಗಳ ಉದ್ಘಾಟನಾ ಕಾರ್ಯಕ್ರಮ ಆಗುಂಬೆ ವೃತ್ತ, ಮೇಳಿಗೆ, ಬಸವಾನಿಯಲ್ಲಿ ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ತೀರ್ಥಹಳ್ಳಿ ಪಟ್ಟಣದ ಆಗುಂಬೆ ವೃತ್ತದಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದಲ್ಲಿ ನಡೆಯಲಿದೆ. ಮಧ್ಯಾಹ್ನ 4 ಗಂಟೆಗೆ ಮೇಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಶ್ರೀ ಆಂಜನೇಯ ದೇವಸ್ಥಾನದ ಸಮೀಪ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು. ಸಂಜೆ 5 ಗಂಟೆಗೆ ಬಸವಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮುಂಭಾಗ ಹಾಗೂ ಬಸವಾನಿ ಕೃಷಿ ಪತ್ತಿನ ಸಹಕಾರ ಸಂಘದ ಸಮೀಪ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.
ಗ್ರಾಮೀಣ ಭಾಗದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಅನುಕೂಲಕರ ಸಾರಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಡಾ. ಆರ್. ಎಂ. ಮಂಜುನಾಥ್ ಗೌಡ ಅವರ ವಿಶೇಷ ಅನುದಾನದಲ್ಲಿ ಈ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಸರ್ವರನ್ನು ಈ ಕಾರ್ಯಕ್ರಮಗಳಿಗೆ ಸ್ವಾಗತಿಸಲಾಗಿದೆ.







