ಕರವೇಯಿಂದ ಮೇಳಿಗೆ ಶಾಲೆ ಮಕ್ಕಳಿಗೆ ನೋಟ್ ಬುಕ್
– ಕರ್ನಾಟಕ ರಕ್ಷಣಾ ವೇದಿಕೆ ತೀರ್ಥಹಳ್ಳಿ ಸಹಯೋಗ
– ಕರವೇ ಅಧ್ಯಕ್ಷರಾದ ಸುರೇಂದ್ರ ಯಡೂರು ಸಾರಥ್ಯ
NAMMUR EXPRESS NEWS
ತೀರ್ಥಹಳ್ಳಿ : ಕರ್ನಾಟಕ ರಕ್ಷಣಾ ವೇದಿಕೆ ತೀರ್ಥಹಳ್ಳಿ ತಾಲೂಕು ಘಟಕದ ವತಿಯಿಂದ ಜುಲೈ 6ರ ಶನಿವಾರ ಮೇಳಿಗೆ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಬುಕ್, ಪೆನ್, ಪೆನ್ಸಿಲ್, ರಬ್ಬರ್ ಮತ್ತು ಇತರೆ ಸಲಕರಣೆಗಳನ್ನು ವಿತರಿಸಲಾಯಿತು.
ತೀರ್ಥಹಳ್ಳಿ ಮಹಿಳಾ ಘಟಕದ ಅಧ್ಯಕ್ಷರಾದ ಜ್ಯೋತಿ ದಿಲೀಪ್, ರವಿ ಎಸ್ಎನ್, ಯುವ ಘಟಕದ ಅಧ್ಯಕ್ಷರಾದ ಶ್ರೀಕಾಂತ್, ಕಟ್ಟೆ ಕರುಣ್, ಮಹೇಶ್, ಲಕ್ಷ್ಮೀದೇವಿ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ರೇಖಾ ಹಾಗೂ ಮಂಜುನಾಥ್ ಸಹಕರಿಸಿದರು.
