Categories
death ಚಿಕ್ಕಮಗಳೂರು ತೀರ್ಥಹಳ್ಳಿ

ಸೇತುವೆ ಮೇಲಿಂದ ನದಿಗೆ ಜಿಗಿದು ನರ್ಸ್ ಸಾವು!

ಸೇತುವೆ ಮೇಲಿಂದ ನದಿಗೆ ಜಿಗಿದು ನರ್ಸ್ ಸಾವು!

– ಮುಡುಬದಲ್ಲಿ ಆತ್ಮಹತ್ಯೆ: ಕಾರಣ ನಿಗೂಢ
– ಶಿವಮೊಗ್ಗದಿಂದ ಬಂದು ನದಿಗೆ ಹಾರಿದಳು!

ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಎನ್. ಆರ್. ಪುರ:ಸೇತುವೆ ಮೇಲಿಂದ ನದಿಗೆ ಜಿಗಿದು ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಮುತ್ತಿನಕೊಪ್ಪ ಮೂಲದ ರನ್ಯ (35) ಎಂದು ಗುರುತಿಸಲಾಗಿದೆ. ಈಕೆ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರನ್ಯ ಅವರು ಮಡಬು ಸೇತುವೆ ಬಳಿ ಬಂದು, ದಿಢೀರನೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ತಕ್ಷಣವೇ ಕಾರ್ಯಾಚರಣೆ ನಡೆಸಲಾಗಿದೆ. ರನ್ಯ ಅವರ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಮೃತ ರನ್ಯ ಅವರಿಗೆ ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿತ್ತು. ಇವರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಸಂಬಂಧ ಎನ್. ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.