ರಸ್ತೆಬದಿ ರಾಸಾಯನಿಕ ವಿಷಪೂರಿತ ಕಸದ ರಾಶಿ ಜನರಿಗೆ ಆತಂಕ!
– ಬೀದಿ ನಾಯಿಗಳ ಕಾಟ ಜೋರು
– ದೂರು ನೀಡಿದ್ದರೂ ಅಧಿಕಾರಿಗಳ ನಿರ್ಲಕ್ಷ??
NAMMUR EXPRESS NEWS
ತೀರ್ಥಹಳ್ಳಿ: ಹುಣಸವಳ್ಳಿ ಮತ್ತು ಮೇಲಿನ ಕುರುವಳ್ಳಿ ಗ್ರಾಮದಲ್ಲಿ ರಾಸಾಯನಿಕ ಕಸಗಳನ್ನು ರಸ್ತೆಬದಿ ಹಾಕುವುದರಿಂದ ಜನರ ಆರೋಗ್ಯಕ್ಕೆ ಹಾಗೂ ದನಕರುಗಳಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.ಈ ಹಿಂದೆಯೂ ದೂರು ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ. ವಿಷಪೂರಿತ ರಾಸಾಯನಿಕ ವಸ್ತು , ಕಸ ಹಾಗೂ ಪ್ಲಾಸ್ಟಿಕ್ ಎಲ್ಲೆಂದರಲ್ಲಿ ಚೆಲ್ಲುವ ಜನರಿಂದ ತೊಂದರೆ ಎದುರಿಸುವಂತಾಗಿದೆ. ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು, ಆ ವೇಳೆ ಭರವಸೆ ನೀಡಿದ್ದರೂ ಈ ವರೆಗೆ ಕಾರ್ಯಗತವಾಗಿಲ್ಲ. ನೂತನ ಜಿಲ್ಲಾಧಿಕಾರಿ ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಹುಣಸವಳ್ಳಿ ಮತ್ತು ಮೇಲಿನ ಕುರುವಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
– ಬೀದಿ ನಾಯಿಗಳ ಕಾಟ ಜೋರು
ಹುಣಸವಳ್ಳಿ ಮತ್ತು ಮೇಲಿನ ಕುರುವಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಜೋರಾಗಿದ್ದು, ಕೆಲ ಕಡೆ ಜನರು ಸಂಚರಿಸುವುದೇ ಕಷ್ಟವಾಗಿದೆ. ಬಹೇತಕ ರಸ್ತೆಗಳಲ್ಲಿ ಬೀದಿ ನಾಯಿಗಳು ಹೆಚ್ಚಿವೆ. ಹೆಜ್ಜೆ ಹೆಜ್ಜೆಗೂ ಗುರ್ ಎನ್ನುವ ನಾಯಿಗಳು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸುತ್ತಿವೆ. ಬೀದಿ ನಾಯಿಗಳ ಹಾವಳಿಯಿಂದ ಜನರು ರೋಸಿ ಹೋಗಿದ್ದಾರೆ. ಪಾದಚಾರಿಗಳು ಮತ್ತು ದ್ವಿ ಚಕ್ರ ವಾಹನಗಳ ಸವಾರರ ಸಂಚಾರಕ್ಕೆ ಸಂಚಕಾರ ಎದುರಾಗಿದೆ. ಬಡಾವಣೆಗಳಲ್ಲಿತಿಂಡಿ, ತಿನಿಸುಗಳನ್ನು ಹಿಡಿದು ಸಾಗುವ ಪುಟ್ಟ ಮಕ್ಕಳ ಮೈಮೇಲೆ ಬೀದಿ ನಾಯಿಗಳು ದಾಳಿ ಇಡುತ್ತಿದ್ದು, ಸಾರ್ವಜನಿಕರಲ್ಲಿಆತಂಕ ಮೂಡಿದೆ. ನಾಯಿಗಳ ಕಾಟ ತಪ್ಪಿಸುವಲ್ಲಿ ಸ್ಥಳೀಯ ಅಧಿಕಾರಿಗಳು ಮತ್ತು ಈ ಭಾಗದ ಸದಸ್ಯರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹಿಡಿಶಾಪ ಹಾಕುತ್ತಿದ್ದಾರೆ.ಜೊತೆಗೆ ಬೀದಿ ಬದಿ ನಾಯಿಗಳು ಕಂಪೌಂಡ್ ಮೂಲಕ ಸಾಗಿ ಬರುತ್ತಿದ್ದು, ಅದನ್ನು ಮುಚ್ಚುವ ಯಾವುದೇ ಕಾರ್ಯ ನಡೆಸುತ್ತಿಲ್ಲ ಈ ಹಿಂದೆ ಮಾಧ್ಯಮಗಳಲ್ಲಿ ಮತ್ತು ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಹುಣಸವಳ್ಳಿ ಮತ್ತು ಮೇಲಿನ ಕುರುವಳ್ಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.