Categories
ತೀರ್ಥಹಳ್ಳಿ

ತೀರ್ಥಹಳ್ಳಿ ಅಂಚೆ ಕಚೇರಿಯಲ್ಲಿ ಜನ ಸಂಪರ್ಕ ಅಭಿಯಾನ

ತೀರ್ಥಹಳ್ಳಿ ಅಂಚೆ ಕಚೇರಿಯಲ್ಲಿ ಜನ ಸಂಪರ್ಕ ಅಭಿಯಾನ
– ದೇಶಾದಲ್ಲಿ 1,56,000 ಅಂಚೆ ಕಚೇರಿಗಳ ಕಾರ್ಯನಿರ್ವಹಣೆ
– ಅಂಚೆ ಇಲಾಖೆಯಲ್ಲಿ ನೂರಕ್ಕೂ ಹೆಚ್ಚು ಸೇವೆ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯ ಅಂಚೆ ಕಚೇರಿಯಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ನಡೆಯಿತು. ಪೋಸ್ಟ್ ಆಫೀಸ್ ನಲ್ಲಿರುವ ಸೌಲಭ್ಯ ಹಾಗೂ ಸ್ಕೀಮ್ ಗಳ ಬಗ್ಗೆ ಜಲಸಾಮಾನ್ಯರಿಗೆ ತಲುಪಬೇಕು ಎನ್ನುವ ದೃಷ್ಟಿಯಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರದಲ್ಲಿ ಅಂಚೆ ಇಲಾಖೆ ಈ ಮೊದಲು ಸಂಪರ್ಕ ಸಾಧನೆಗೆ ಮಾತ್ರ ಮೀಸಲಾಗಿತ್ತು. ಈ ಇಲಾಖೆ ಇದೀಗ ನೂರಕ್ಕೂ ಹೆಚ್ಚು ಸೇವೆಗಳನ್ನು ಗ್ರಾಹಕರಿಗೆ ಒದಗಿಸುವ ಮೂಲಕ ಜಗತ್ತಿನಲ್ಲಿಯೇ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವುದು ಹೆಮ್ಮೆಯ ವಿಷಯ. ರಾಷ್ಟ್ರದ ಪ್ರತಿ ಊರುಗಳಲ್ಲಿ ಅಂಚೆ ಕಚೇರಿಗಳಿದ್ದು, 1,56,000 ಅಂಚೆ ಕಚೇರಿಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಭಾರತ ದೇಶದ ಯಾವುದೇ ಊರಿಗೆ ಹೋದರೂ ನಿಮಗೆ ಅಂಚೆ ಕಛೇರಿ ಕಾಣಸಿಗುವುದರಿಂದ, ಸಾರ್ವಜನಿಕರು ದೇಶದ ಎಲ್ಲಾ ಪ್ರದೇಶಗಳೊಂದಿಗೆ ಸಂಪರ್ಕದಲ್ಲಿರಲು ಸಾಧ್ಯವಾಗಿದೆ ಎಂದು ಅಂಚೆ ಇಲಾಖೆ ಮುಖ್ಯಸ್ಥರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಾಗರಾಜ್, ದಂತ ವೈದ್ಯರಾದ ಡಾ. ಗುರುರಾಜ್, ಕೆ ಎಸ್ ಕೃಷ್ಣಮೂರ್ತಿ, ಮುಖ್ಯಧೀಶರಾದ ಜಯರಾಮ್ ಶೆಟ್ಟಿ, ಹರೀಶ್ ಕೆ ಎಸ್ ಸೇರಿದಂತೆ ಪ್ರಮುಖರು ಹಾಜರಿದ್ದರು.

ಅಂಚೆ ಇಲಾಖೆಯಲ್ಲಿ ಏನೇನು ಸೇವೆ?

ಭಾರತೀಯ ಅಂಚೆ ಸೇವೆ ವಿವಿಧ ಸೇವೆಗಳನ್ನು ತನ್ನ ಗ್ರಾಹಕರಿಗೆ ಒದಗಿಸುತ್ತಿದ್ದು ಅದರಲ್ಲಿ ಪತ್ರ ವ್ಯವಹಾರ, ನೊಂದಾಯಿತ ಪತ್ರವ್ಯವಹಾರ, ಶೀಘ್ರ ಅಂಚೆ, ಪಾರ್ಸೆಲ್ ಸೇವೆ, ಇ-ಅಂಚೆ, ವಿಶೇಷ ಕೊರಿಯರ್ ಸೇವೆ ಇನ್ನಿತರ ಸೇವೆಗಳು ಸೇರಿವೆ. ಇದರ ಜೊತೆಗೆ ಹಣದ ವ್ಯವಹಾರದಲ್ಲಿ ಮನಿ ಆರ್ಡರ್, ಮ್ಯುಚುಯಲ್ ಫಂಡ್, ಹಣ ವರ್ಗಾವಣೆ ಸೇರಿವೆ. ಮತ್ತು ವಿಶೇಷ ಉಳಿತಾಯ ಸೇವೆಗಳಾದ ರಾಷ್ಟ್ರೀಯ ಉಳಿತಾಯ ಪತ್ರ,ಕಿಸಾನ್ ವಿಕಾಸ್ ಪತ್ರ, ಆವರ್ತಿತ ಠೇವಣಿ ಮತ್ತು ನಿಶ್ಚಿತ ಠೇವಣಿಗಳನ್ನು ಒದಗಿಸುತ್ತಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.