ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಗ್ದೇವಿ ವಿದ್ಯಾರ್ಥಿಗಳ ಸಾಧನೆ
– ಮರು ಮೌಲ್ಯ ಮಾಪನದಲ್ಲಿ ಮತ್ತಿಬ್ಬರಿಗೆ ರಾಜ್ಯ ಮಟ್ಟದಲ್ಲಿ ರ್ಯಾಂಕ್
– ಸಂಜಯ್ ಎಸ್, ಸಮನ್ವಿತ ಎಸ್ ರಾವ್ ಅವರಿಗೆ ರ್ಯಾಂಕ್
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ: ಇತ್ತೀಚಿಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಮರು ಮೌಲ್ಯಮಾಪನದಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. 2025-26ನೇ ಸಾಲಿನ ದ್ವಿತೀಯ ಪಿಯುಸಿ ಮರು ಮೌಲ್ಯ ಮಾಪನದಲ್ಲಿ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಸಂಜಯ್ ಎಸ್ ಅವರು 600ಕ್ಕೆ 592 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟದಲ್ಲಿ ಎಂಟನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸಂಜಯ್ ಅವರು ಸೊಪ್ಪುಗುಡ್ಡೆಯ ಶ್ರೀಮತಿ ಶೋಭಾ ಮತ್ತು ಶ್ರೀಸತೀಶ್ ಇವರ ಪುತ್ರರಾಗಿದ್ದು ಶಿಕ್ಷಣದಲ್ಲಿ ಸಾಧನೆ ಮಾಡುವ ಮೂಲಕ ತಾಲ್ಲೂಕಿಗೆ ಹಾಗೂ ವ್ಯಾಸಂಗ ಮಾಡಿರುವ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.
ಹಾಗೆಯೇ 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ವಾಗ್ದೇವಿ ಶಿಕ್ಷಣ ಸಂಸ್ಥೆಯ ಮತ್ತೋರ್ವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಸಮನ್ವಿತ ಎಸ್ ರಾವ್ ಅವರು 600ಕ್ಕೆ 593 ಅಂಕಗಳನ್ನು ಗಳಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಏಳನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ ಮೂರನೇ ಸ್ಥಾನ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಶಿಕ್ಷಣ ಸಂಸ್ಥೆಗೆ ಮತ್ತು ಪೋಷಕರಿಗೆ ಕೀರ್ತಿಯನ್ನು ತಂದಿದ್ದಾರೆ. ಸಮನ್ವಿತ ಎಸ್ ರಾವ್ ಅವರು ಹಾದಿಗಲ್ಲಿನ ಶ್ರೀಮತಿ ರಮ್ಯಾ ಮತ್ತು ಶ್ರೀಸುಧೀರ್ ದಂಪತಿಗಳ ಪುತ್ರಿಯಾಗಿದ್ದಾರೆ. ವಿದ್ಯಾರ್ಥಿಗಳ ಈ ಶೈಕ್ಷಣಿಕ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಉಪನ್ಯಾಸಕ ವೃಂದ ಮತ್ತು ಪೋಷಕರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.








