ರಾಷ್ಟ್ರಧ್ವಜಕ್ಕಾಗುವ ಅಪಮಾನ ತಡೆಗಟ್ಟಿ ಪ್ಲೀಸ್
– ಸ್ವಾಂತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಪಮಾನ
– ಹಿಂದೂ ಜನಜಾಗೃತಿ ಸಮಿತಿಯಿಂದ ತಾಲೂಕು ಆಡಳಿತಕ್ಕೆ ಮನವಿ
NAMMUR EXPRESS NEWS
ತೀರ್ಥಹಳ್ಳಿ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸ್ವಾಂತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು ಮತ್ತು ಸರ್ಕಾರವು ನಿಷೇಧಿಸಿರುವ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವವರ ವಿರುದ್ಧ ಅಪರಾಧವನ್ನು ದಾಖಲಿಸುವ ಕುರಿತು ಮನವಿ ಸಲ್ಲಿಕೆಯಾಗಿದೆ. ತಾಲ್ಲೂಕು ಉಪ ತಹಶೀಲ್ದಾರ್ ಸತ್ಯಮೂರ್ತಿ ಆದೀಕ್ಷಕರ ಕಛೇರಿಯ ಡಿ. ವೈ.ಎಸ್. ಪಿ ಗಜಾನನ ವಾಮನ ಸುತಾರ ಮತ್ತು ಸಾರ್ವಜನಿಕ ಕ್ಷೇತ್ರ ಶಿಕ್ಷಣಧಿಕಾರಿ ಗಣೇಶ್ ಇವರಿಗೆ ಮನವಿ ಸಲ್ಲಿಸಲಾಯಿತು.
ರಾಷ್ಟ್ರಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ 15ಮತ್ತು ಜನವರಿ26ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ ಆದರೆ ಅದೇ ದಿನ, ಅದೇ ಪ್ಲಾಸ್ಟಿಕ್ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ ಧ್ವಜಗಳು ಬೇಗನೇ ನಾಶವಾಗುವುದಿಲ್ಲ, ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ರಾಷ್ಟ್ರಧ್ವಜದ ಈ ಅವಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯು ಮುಂಬೈ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (೧೦೩/೨೦೧೧) ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದಾಗ, ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜದ ಅಪಮಾನವನ್ನು ನಿಲ್ಲಿಸುವಂತೆ ನ್ಯಾಯಾಲಯವು ಸರ್ಕಾರಕ್ಕೆ ಆದೇಶ ನೀಡಿತ್ತು. ಅದರಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆಗಳು ಮತ್ತು ಶಿಕ್ಷಣ ಇಲಾಖೆಗಳು ಈ ಸಂಬಂಧ ಸುತ್ತೋಲೆಯನ್ನೂ ಹೊರಡಿಸಿದ್ದವು. ಇದರೊಂದಿಗೆ ಕೇಂದ್ರ ಸರಕಾರವೂ `ಪ್ಲಾಸ್ಟಿಕ್ ನಿಷೇಧಿಸಲು’ ನಿರ್ಧರಿಸಿದೆ. ಅದರ ಪ್ರಕಾರವೂ `ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮಾಡುವುದು’ ಸಂವಿಧಾನಬಾಹಿರವಾಗಿದೆ.
ಈ ವರ್ಷ, ಅಂಗಡಿಗಳಲ್ಲಿ ಮತ್ತು ಇ-ಕಾಮರ್ಸ್ ಜಾಲತಾಣಗಳಲ್ಲಿ(ವೆಬ್ಸೈಟ್) ತ್ರಿವರ್ಣ ಮಾಸ್ಕಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ತ್ರಿವರ್ಣ ಮಾಸ್ಕ್ ಬಳಕೆಯಿಂದ ರಾಷ್ಟ್ರಧ್ವಜದ ಪಾವಿತ್ರಕ್ಕೆ ಧಕ್ಕೆಯಾಗುತ್ತದೆ. ತ್ರಿವರ್ಣ ಮಾಸ್ಕ್’ ದೇಶಭಕ್ತಿಯ ಪ್ರದರ್ಶನದ ಮಾಧ್ಯಮವಲ್ಲ, ಅಲ್ಲದೇ ಧ್ವಜ ಸಂಹಿತೆಗನುಸಾರ ರಾಷ್ಟ್ರಧ್ವಜವನ್ನು ಈ ರೀತಿ ಬಳಸುವುದು’ ಧ್ವಜಕ್ಕೆ ಮಾಡಿದ ಅವಮಾನವೇ ಆಗಿದೆ. ಇದು ರಾಷ್ಟ್ರೀಯ ಗೌರವದ ಮಾನನಷ್ಟ ತಡೆ ಕಾಯ್ದೆ ೧೯೭೧’ರ ಉಲ್ಲಂಘನೆಯಾಗಿದೆ. ಆದ್ದರಿಂದ, ‘ತ್ರಿವರ್ಣ ಮಾಸ್ಕ್’ ಮಾರಾಟ ಮಾಡುವ ಮತ್ತು ಬಳಸುವವರ ವಿರುದ್ಧ ಅಪರಾಧಗಳನ್ನು ನಮೂದಿಸಬೇಕು.
ರಾಷ್ಟ್ರೀಯ ಚಿಹ್ನೆಗಳ ಅಪಮಾನಗೊಳಿಸುವುದನ್ನು ತಡೆಯಲು, ಸಮಿತಿಯು ಪ್ರತಿ ವರ್ಷ `ರಾಷ್ಟ್ರಧ್ವಜವನ್ನು ಗೌರವಿಸಿ!’ ಈ ಅಭಿಯಾನವನ್ನು ನಡೆಸುತ್ತದೆ. ಅನುಮತಿಯಿಲ್ಲದಿರುವಾಗಲೂ ಸರ್ಕಾರದ ಅಧಿನಿಯಮಗಳನ್ನು ಧಿಕ್ಕರಿಸಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಮಾರಾಟಗಾರರು ಹಾಗೂ ಧ್ವಜ ಸಂಹಿತೆ ಪ್ರಕಾರ ಧ್ವಜವನ್ನು ಗೌರವಿಸದ ಜನರು, ಸಂಸ್ಥೆಗಳು ಮತ್ತು ಗುಂಪುಗಳು ಅಥವಾ ಬೇರೆಯವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಲಾಯಿತು.
ಹಿಂದೂ ಜನಜಾಗೃತಿ ಸಮಿತಿಯ ಹರೀಶ್ ಗೌಡ, ನರೇಂದ್ರ ಗೌಡ, ರಾಷ್ಟ್ರ ಪ್ರೇಮಿಗಳಾದ ಕಾಂತೇಶ್, ರಾಘವೇಂದ್ರ, ಸುಭಾಶ್ ಹೆಗಡೆ, ಸುಧೀರ್, ವೆಂಕಪ್ಪ ಇನ್ನು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ : ಅಡಿಕೆ ಮಾರುಕಟ್ಟೆ: ಎಷ್ಟಿದೆ ದರ?
HOW TO APPLY : NEET-UG COUNSELLING 2023